ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ 'ಸಂವಿಧಾನ ಹತ್ಯೆ ದಿವಸ್' ಕುರಿತು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ. ಟಿ. ಕುಮಾರಸ್ವಾಮಿ, ಮಾಜಿ ಶಾಸಕರಾದ ಜಿ. ಹೆಚ್. ತಿಪ್ಪಾರೆಡ್ಡಿ ಹಾಗೂ ಶಾಸಕ ಎಂ. ಚಂದ್ರಪ್ಪ ಅವರು ಪ್ರಮುಖವಾಗಿ ಭಾಗವಹಿಸಿದ್ದರು.
ದೇಶದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ದಿನಗಳನ್ನು ನೆನಪಿಸುವ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಎಸ್ಸಿ ಮೋರ್ಚಾದ ಪ್ರಮುಖ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



