Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ವಸತಿ ಯೋಜನೆಯ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಜಮೀರ್

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ 1.25 ಲಕ್ಷ ಸಹಾಯಧನವು ಯಾವುದಕ್ಕೂ ಸಾಕಾಗುತ್ತಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಲೇ ಇವೆ. ಇದು ಸರ್ಕಾರದ ಗಮನಕ್ಕೆ ಬಂದಿದ್ದು
ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಟ 3 ರಿಂದ 4 ಲಕ್ಷ ರೂ.ವರೆಗಾದರೂ  ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ವಿಧಾನ ಪರಿಷತ್ತನಲ್ಲಿಂದು ಸದಸ್ಯರಾದ ಪ್ರದೀಪ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವಣೆಯು ಪರಿಶೀಲನೆಯಲ್ಲಿರುತ್ತದೆ.

ಈ ಸಹಾಯಧನ ಹೆಚ್ಚಳ ಸಂಬಂದ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದರು.


ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಲು ಬಾಕಿ ಇರುವುದಿಲ್ಲ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಅಕ್ಟೋಬರ್-2025ರ ಅಂತ್ಯಕ್ಕೆ 1324.26 ರೂ ಅನುದಾನವನ್ನು ಅರ್ಹ  ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು