ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ರೈತ ಮೋರ್ಚಾ ವಿಶೇಷ ಸಭೆ ನಡೆಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಮುಂಬರುವ ದಿನಗಳಲ್ಲಿ ಭ್ರಷ್ಟ ಹಾಗೂ ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟಗಳನ್ನು ಮತ್ತಷ್ಟು ಚುರುಕುಗೊಳಿಸುವ ಮೂಲಕ ರೈತ ಮೋರ್ಚಾ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಜನಪರ ಯೋಜನೆಗಳು ಮತ್ತು ರೈತರು, ಬಡವರ ಪರವಾದ ಕಾರ್ಯಕ್ರಮಗಳನ್ನು ಎಲ್ಲೆಡೆ ಪಸರಿಸಿ ರೈತ ಮೋರ್ಚಾ ಸಂಘಟನೆಯನ್ನು ಮತ್ತಷ್ಟು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂಬ ಕರೆ ನೀಡಲಾಯಿತು.
ಇದೇ ವೇಳೆ ರಾಜ್ಯ ಮತ್ತು ಜಿಲ್ಲಾ ಸಹಕಾರ ಕ್ಷೇತ್ರಗಳಿಗೆ ಚುನಾಯಿತರಾಗಿರುವ ರೈತ ಮೋರ್ಚಾ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮುರುಡಪ್ಪ, ಡಾ. ಬಿ. ಸಿ. ನವೀನ್ ಕುಮಾರ್, ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್, ಬ್ಯಾಟರಂಗೇಗೌಡ, ರೈತ ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.


