Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ

Advertisement
ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಯುವ ಗುತ್ತಿಗೆದಾರರೊಬ್ಬರು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್​ನೋಟ್​ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಟ್ರಾಕ್ ಮೇಲೆ ಪತ್ತೆಯಾಗಿದೆ.
ಗುತ್ತಿದಾರ ಸಚಿನ್ ಬರೆದಿಟ್ಟಿರುವ ಡೆತ್​ ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.


15 ಲಕ್ಷಕ್ಕೂ ಹೆಚ್ಚು ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಜೊತೆಗೆ 1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಜು ಕಪನೂರು ವಿರುದ್ಧ ಆರೋಪಿಸಲಾಗಿದೆ.
ಸಚಿನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡೆತ್​ ನೋಟ್​ನಲ್ಲಿ ಉಲ್ಲೇಖಿಸಿರುವ ಹೆಸರಿನವರನ್ನು ಕರೆಯಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆಯೇ ಪೊಲೀಸರು ಸಚಿನ್ ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು
, ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಿ ಡೆತ್ ನೋಟ್​ನಲ್ಲಿ ದಾಖಲಿಸಲಾಗಿದೆ.
15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್ ನೀಡದೇ ದೋಖಾ ಹಾಗೂ 1 ಕೋಟಿ ರೂಪಾಯಿ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ನೋಟ್​ನಲ್ಲಿ ಸಚಿನ್ ಉಲ್ಲೇಖಿಸಿದ್ದಾರೆ.


ಈ ಹಿಂದೆ ಬೆಳಗಾವಿಯ ಗುತ್ತಿಗೆದಾರ ಸಂತೋಷ್​ ಎನ್ನುವರು ಸಹ ಅಂದಿನ ಸಚಿವ ಕೆಎಸ್ ಈಶ್ವರಪ್ಪ ಅವರ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಮಾಡಿದ್ದ ಹಣ ಮಂಜೂರು ಮಾಡದಿದ್ದಕ್ಕೆ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ ಅವರು ರಾಜೀನಾಮೆ ಕೊಡಬೇಕಾಗಿ ಬಂತು. ಇದೀಗ ಬೀದರ್​ನಲ್ಲಿ ಸಚಿನ್ ಆತ್ಮಹತ್ಯೆಯಲ್ಲಿ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಆಪ್ತನ ಮೇಲಿನ ಆರೋಪಕ್ಕೆ ಖುದ್ದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನನಗೂ ಈಗಷ್ಟೆ ವಿಚಾರ ಗೊತ್ತಾಯ್ತು. ಮಾಧ್ಯಮಗಳಲ್ಲಿ ಬಂದಿದೆ ನಾನೇ ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಪಕ್ಷದವರೇ ಆಗಿರಲಿ, ನನ್ನ ಆಪ್ತನೇ ಆಗಿರಲಿ. ಅದು ನನ್ನ ಇಲಾಖೆಗೆ ಬರುತ್ತೆ. ತನಿಖೆ ಮಾಡಿಸುತ್ತೇನೆ.

ಇಲಾಖಾ ತನಿಖೆ ಕೂಡ ಮಾಡಿಸುತ್ತೇನೆ. ನಾನು ಯಾವುದೇ ಮುಚ್ಚುಮರೆ ಮಾಡಲ್ಲ. ತನಿಖೆ ಮಾಡಿಸಲ್ಲ ಅಂತ ಹೇಳಲ್ಲ. ತನಿಖೆಯಿಂದ ಸತ್ಯಾಸತ್ಯತೆ ಹೊರಗೆ ಬರಲಿ. ಸಮಗ್ರ ತನಿಖೆಯಾಗಲಿ ಎಂದು ಗೃಹ ಸಚಿವರಿಗೆ ನಾನೇ ಮನವಿ ಮಾಡುತ್ತೆನೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ