Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.10 ರಂದು ಉದ್ಯಮ ದಿಗ್ಗಜರು ಮತ್ತು  ನವೋದ್ಯಮಗಳ ಸಮಾವೇಶ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೂ.10ರಂದು ಉತ್ಪಾದನಾ ಮಂಥನ 58 ಉದ್ಯಮ ದಿಗ್ಗಜರು ಮತ್ತು 10 ನವೋದ್ಯಮಗಳು ಭಾಗಿ ಆಗಲಿದ್ದಾರೆಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಕರ್ನಾಟಕವನ್ನು ʼಜಾಗತಿಕ ತಯಾರಿಕಾ ಕೇಂದ್ರʼವನ್ನಾಗಿ ಅಭಿವೃದ್ಧಿಪಡಿಸಲು ನೀಲನಕ್ಷೆ ತಯಾರಿಸುವ ಚಿಂತನ ಮಂಥನಕ್ಕೆ ವೇದಿಕೆ ಕಲ್ಪಿಸಲಿರುವ  ಒಂದು ದಿನದ  ʼಉತ್ಪಾದನಾ ಮಂಥನ್ʼ ಸಮಾವೇಶವು  ಇದೇ 10ರಂದು (ಮಂಗಳವಾರ) ಬೆಂಗಳೂರಿನಲ್ಲಿ  ನಡೆಯಲಿದೆ ಎಂದು ಅವರು ತಿಳಿಸಿದರು.

 ಪ್ರಮುಖ ಕಂಪನಿಗಳಾದ ಕಾಲಿನ್ಸ್ ಏರೊಸ್ಪೇಸ್, ಮಹೀಂದ್ರಾ ಏರೊಸ್ಪೇಸ್, ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್, ಅಪ್ಲೈಡ್ ಮಟೇರಿಯಲ್ಸ್, ಏರ್ ಇಂಡಿಯಾ, ಬಿಐಎಲ್ ಸೇರಿದಂತೆ 58 ಕೈಗಾರಿಕೆಗಳು ಹಾಗೂ 10ನವೋದ್ಯಮಗಳು ಸಮಾವೇಶದಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ.

ರಾಜ್ಯದ ಬಂಡವಾಳ ಹೂಡಿಕೆಯ ಆಕರ್ಷಣೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ವಲಯವಾರು ನೀಲನಕ್ಷೆ ರೂಪಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ ಎಂದು ಸಚಿವ ಪಾಟೀಲ್ ಹೇಳಿದರು.

ʼವೈಮಾಂತರಿಕ್ಷ ಹಾಗೂ ರಕ್ಷಣೆ, ಎಲೆಕ್ಟ್ರಾನಿಕ್ಸ್ (ಬಿಡಿಭಾಗಗಳು) ಸೆಮಿಕಂಡಕ್ಟರ್ಸ್, ಭಾರಿ ಯಂತ್ರೋಪಕರಣ- ಮಷಿನ್‌ಟೂಲ್ಸ್, ರೋಬೊಟಿಕ್ಸ್, ವಾಹನ ತಯಾರಿಕೆ / ಬಿಡಿಭಾಗಗಳು ಮತ್ತು ವಿದ್ಯುತ್‌ಚಾಲಿತ ವಾಹನಗಳು (ಇವಿ), ಜವಳಿ, ಗ್ರಾಹಕ ಉತ್ಪನ್ನಗಳು (ಎಫ್‌ಎಂಸಿಜಿ, ಪಾದರಕ್ಷೆ ಹಾಗೂ ಆಟಿಕೆ) ಒಳಗೊಂಡಿರುವ 6 ಪ್ರಮುಖ ತಯಾರಿಕಾ ವಲಯಗಳಲ್ಲಿನ ರಾಜ್ಯದ ಸಾಧನೆ ಮುನ್ನಡೆಸಲು ಹಮ್ಮಿಕೊಳ್ಳಬೇಕಾದ ಕ್ರಮಗಳ ಬಗ್ಗೆ ಉದ್ಯಮ ದಿಗ್ಗಜರು ಈ ಸಮಾವೇಶದಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ.

ಏರ್ ಇಂಡಿಯಾದ  ಪ್ರಾಜೆಕ್ಟ್ಸ್ ಮುಖ್ಯಸ್ಥ  ಶ್ರೀ ಜಿತಿನ್ ಗುಲಾಟಿ, ಮಹೀಂದ್ರಾ ಏರೋಸ್ಪೇಸ್ ನ ಸಿಒಒ   ಶ್ರೀಕಾರ್ತಿಕ್ ಕೃಷ್ಣಮೂರ್ತಿ, ಹಿಟಾಚಿ ಎನರ್ಜಿ-ಯ ಸಿಇಒ  ಶ್ರೀವೇಣು ನುಗುರಿ, ಟಾಟಾ ಹಿಟಾಚಿಯ ವ್ಯವಸ್ಥಾಪಕ ನಿರ್ದೇಶಕ  ಶ್ರೀ ಸಂದೀಪ್ ಸಿಂಗ್, ಹೋಂಡಾ-ದ ಕಾರ್ಯಾಚರಣೆ ಮುಖ್ಯಸ್ಥ ಶ್ರೀ ಸುನಿಲ್ ಮಿತ್ತಲ್ಸೇರಿದಂತೆ ಹಲವು  ಪ್ರಮುಖರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ʼಇದು ಬರೀ ಸಮಾವೇಶ  ಆಗಿರುವುದಿಲ್ಲ. ಕರ್ನಾಟಕವನ್ನು ಜಾಗತಿಕ ತಯಾರಿಕಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿರ್ಣಾಯಕ ಹೆಜ್ಜೆಯಾಗಿರಲಿದೆ ಎಂದು ಎಂ.ಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ