Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಸಮಾಧಾನಿತ ಶಾಸಕರಿಗೆ ನಿಗಮ-ಮಂಡಳಿ 'ಅಧ್ಯಕ್ಷ' ಪಟ್ಟ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದೆ ತೀವ್ರ ಬೇಸರಗೊಂಡಿರುವ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಸಮಾಧಾನಪಡಿಸಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ.

ಸುಮಾರು 25 ಕ್ಕೂ ಹೆಚ್ಚು ಶಾಸಕರಿಗೆ ಸಚಿವ ದರ್ಜೆಯ ಸ್ಥಾನಮಾನದೊಂದಿಗೆ ಪ್ರಮುಖ ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆ ನೀಡಲು ಪಟ್ಟಿ ಸಿದ್ಧಪಡಿಸಲಾಗಿದ್ದು, ಈ ಕುರಿತು ಆಗಸ್ಟ್ 17ರ ಸೋಮವಾರ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆಯಿದೆ.

Advertisement

ಹಳೆಯ ಅಧ್ಯಕ್ಷರ ರಾಜೀನಾಮೆ, ಶಾಸಕರಿಗೆ ಪ್ರಮುಖ ಹುದ್ದೆ:
ಈ ಹಿಂದೆ ವಿವಿಧ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು
, ಅವರಿಂದ ಈಗಾಗಲೇ ರಾಜೀನಾಮೆ ಪಡೆಯಲಾಗಿದೆ. ತೆರವಾದ ಈ ಸ್ಥಾನಗಳಲ್ಲಿ 2-3 ಬಾರಿ ಗೆದ್ದಿರುವ ಹಿರಿಯ ಶಾಸಕರು ಹಾಗೂ ಹೊಸದಾಗಿ ಆಯ್ಕೆಯಾದ ಶಾಸಕರನ್ನು ನೇಮಿಸಲು ನಿರ್ಧರಿಸಲಾಗಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದು ವಂಚಿತರಾದ ನಾಯಕರಿಗೆ ಸೂಕ್ತ ಅಧಿಕಾರ ಹಾಗೂ ಗೌರವ ನೀಡುವ ಮೂಲಕ ಆಡಳಿತದಲ್ಲಿ ಅಸಮಾಧಾನ ಶಮನಗೊಳಿಸುವುದು ಸರ್ಕಾರದ ಮೂಲ ಉದ್ದೇಶವಾಗಿದೆ.

ಈಗಾಗಲೇ ಮುಖ್ಯ ಹುದ್ದೆ ಪಡೆದ ಮೂವರು ನಾಯಕರು:
ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದ ಪ್ರಮುಖ ನಾಯಕರಿಗೆ ಈಗಾಗಲೇ ವಿವಿಧ ಜವಾಬ್ದಾರಿಗಳನ್ನು ವಹಿಸಲಾಗಿದೆ.

ಎ.ಎಸ್. ಪೊನ್ನಣ್ಣ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ.
ಶ್ರೀನಿವಾಸ ಮಾನೆ: ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ನಿಯೋಜನೆ. ಆರ್.ವಿ. ದೇಶಪಾಂಡೆ: ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಅಂತಿಮ ವರದಿ ಸಲ್ಲಿಸಿದ್ದರೂ
, ಪುನಃ ಸಂಪುಟ ದರ್ಜೆಯ ಸಚಿವ ಸ್ಥಾನಮಾನದೊಂದಿಗೆ ಅದೇ ಆಯೋಗದ ಅಧ್ಯಕ್ಷರಾಗಿ ಮರುನೇಮಕ.

ಉಳಿದ 25ಕ್ಕೂ ಹೆಚ್ಚು ಶಾಸಕರಿಗೆ ಸದ್ಯದಲ್ಲೇ ಪ್ರಮುಖ ನಿಗಮ-ಮಂಡಳಿಗಳ ಜವಾಬ್ದಾರಿ ಹಸ್ತಾಂತರವಾಗಲಿದ್ದು, ಸರ್ಕಾರದ ಈ ನಡೆ ಆಡಳಿತ ಪಕ್ಷದಲ್ಲಿನ ಅಸಮಾಧಾನವನ್ನು ಎಷ್ಟರ ಮಟ್ಟಿಗೆ ಶಮನಗೊಳಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ