Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರಷ್ಟತೆ-ಲೂಟಿಕೋರತನ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟತೆ-ಲೂಟಿಕೋರತನಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡಿದರು.
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆ
 ವಾಸ್ತವ ಸ್ಥಿತಿಯನ್ನು ವಿವರಿಸಿ ಆಕ್ರೋಶ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿಬಂದಿರುವ ದುಸ್ಥಿತಿಯನ್ನು ವಿವರಿಸಿದ್ದಾರೆ.

ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಬಡವರ ಮನೆ ಮಂಜೂರಾತಿಗೂ ಲಂಚ ನೀಡಬೇಕಾದ ಪರಿಸ್ಥಿತಿಯನ್ನು ವಿವರಿಸಿ ಸರ್ಕಾರದ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ.

 ಸರ್ಕಾರದ ಕಚೇರಿಗಳಲ್ಲಿ ದರ ಹಾಗೂ ಪರ್ಸೆಂಟೇಜ್ ನಿಗದಿಪಡಿಸಿ ವಸೂಲಿ ಮಾಡಲಾಗುತ್ತಿರುವ ಪರಿಸ್ಥಿತಿಯನ್ನು ಸ್ವತಃ ಕಂದಾಯ ಸಚಿವ ಕೃಷ್ಣಭೈರೇಗೌಡರೇ ಅನಾವರಣಗೊಳಿಸಿದ್ದಾರೆ.

ಕಾಂಗ್ರೆಸ್ ಆಡಳಿತ ರಾಜ್ಯಕ್ಕೆ ಶಾಪಗ್ರಸ್ತವಾಗಿ ಕಾಡುತ್ತಿದೆ, ಭಾರತೀಯ ಜನತಾ ಪಾರ್ಟಿಯ ಹೋರಾಟ, ಜನಾಕ್ರೋಶ ಯಾತ್ರೆಯ ಕುರಿತು ಹಗುರವಾಗಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕರೇ ಇದೀಗ ಉತ್ತರ ಕೊಡುತ್ತಿದ್ದಾರೆ ಎಂದು ವಿಜಯೇಂದ್ರ ಟೀಸಿದ್ದಾರೆ.

ಒಂದು ಕಡೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಶೀತಲ ಸಮರ ನಡೆಯುತ್ತಿದ್ದರೆ, ಮತ್ತೊಂದು ಕಡೆ ಅಭಿವೃದ್ಧಿ ಶೂನ್ಯತೆಯಿಂದ ಭ್ರಷ್ಟತೆಯ ಕೂಪದಲ್ಲಿ ಮುಳುಗಿರುವ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಸಿಡಿದೆದ್ದು ನಿಂತಿದ್ದಾರೆ. ಇದರ ನಡುವೆ ಜನಸಾಮಾನ್ಯರ ಸ್ಥಿತಿ ಅಸಹನೀಯವಾಗಿದೆ, ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎನ್ನುವ ಚಿತ್ರಣ ಸ್ಪಷ್ಟವಾಗಿದೆ ಎಂದು ಅವರು ಆರೋಪಿಸಿದರು.

ವಿಧಾನಸಭಾ ಕ್ಷೇತ್ರವಾರು ಪ್ರತಿಯೊಂದು ಸರ್ಕಾರಿ ಕೆಲಸಕ್ಕೂ ಜನರು ಲಂಚ ನೀಡಬೇಕಾದ ಪರಿಸ್ಥಿತಿಯಿತ್ತು, ಈಗ ಶಾಸಕರನ್ನೂ ಲಂಚದ ಭೂತ ಆವರಿಸಿ ಬಿಟ್ಟಿದೆ ಎಂಬುದನ್ನು ಶಾಸಕರಾದ ಬಿ.ಆರ್.ಪಾಟೀಲ್ ಹಾಗೂ ರಾಜು ಕಾಗೆ ಸಾಕ್ಷೀಕರಿಸಿದ್ದಾರೆ. ಅನುದಾನವಿಲ್ಲದೆ, ಜನರ ಸಮಸ್ಯೆಗಳನ್ನು ನೀಗಿಸಲಾಗದೆ ಕರ್ನಾಟಕ ಕಾಂಗ್ರೆಸ್ ಶಾಸಕರು ಹತಾಶೆಯ ಹಂತ ತಲುಪಿದ್ದಾರೆ. ಶಾಸಕರ ಸಂಯಮದ ಕಟ್ಟೆಯೊಡೆಯಲು ಆರಂಭವಾಗಿದೆ,

ಬಿ.ಆರ್.ಪಾಟೀಲ್, ರಾಜು ಕಾಗೆ ಅವರ ಸಾಲಿನಲ್ಲಿ ಬಹುತೇಕ ಕಾಂಗ್ರೆಸ್ ಶಾಸಕರು ನಿಂತಿದ್ದಾರೆ. ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವ್ಯವಸ್ಥೆಯ ಭ್ರಷ್ಟತೆ ಹಾಗೂ ಲೂಟಿಕೋರತನದಿಂದ ಬೇಸತ್ತು ಅಸಹಾಯಕ ಪರಿಸ್ಥಿತಿ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದುಬಿದ್ದಿದೆ ಎಂದು ವಿಜಯೇಂದ್ರ ದೂರಿದರು.

ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿರ್ಧಾರ ತೆಗೆದುಕೊಳ್ಳಬೇಕೆಂದು ಕರ್ನಾಟಕ ಬಿಜೆಪಿ ಒತ್ತಾಯಿಸುತ್ತದೆ ಎಂದು ವಿಜಯೇಂದ್ರ ಆಗ್ರಹ ಮಾಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ