Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್​ ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರಿಗೆ ಶನಿವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಾದ –ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್​ ಗಜಾನನ ಭಟ್ ಅವರು ಈ ಆದೇಶ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ ದಂಡ ವಿಧಿಸಿ ಆದೇಶಿಸಲಾಗಿದೆ. ಇದರಲ್ಲಿ ಸಂತ್ರಸ್ತೆಗೆ 7 ಲಕ್ಷ ರೂ.ಗಳ ಪರಿಹಾರ ನೀಡಲು ಸೂಚಿಸಲಾಗಿದೆ.

ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಎಸ್‌ಪಿಪಿ ಬಿ.ಎನ್. ಜಗದೀಶ, ಅಧಿಕಾರಯುತ ಸ್ಥಾನದಲ್ಲಿದ್ದ ಪ್ರಜ್ವಲ್ ರೇವಣ್ಣ ಸಂತ್ರಸ್ತ ಮಹಿಳೆಯನ್ನು ಬೆದರಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಅವಿದ್ಯಾವಂತೆಯಾಗಿದ್ದ ಆಕೆಯ ಮೇಲೆ ಪದೇ ಪದೆ ಅತ್ಯಾಚಾರ ನಡೆದಿದೆ. ಅಪರಾಧಿಯಿಂದ ಸಂತ್ರಸ್ತೆ ಸುಲಭವಾಗಿ ಬಲಿಯಾಗಿದ್ದಳು.

ಆಕೆಯ ಒಪ್ಪಿಗೆಯಿಲ್ಲದೇ ಅತ್ಯಾಚಾರದ ವಿಡಿಯೋ ಸಹ ಮಾಡಿಕೊಂಡಿದ್ದರು. ಬ್ಲಾಕ್‌ಮೇಲ್ ಮಾಡುವ ಉದ್ದೇಶದಿಂದಲೇ, ಅಪರಾಧಿ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿಕೊಂಡಿದ್ದು, ಅವುಗಳನ್ನು ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. ವಿಡಿಯೋ ಹೊರಬಂದ ನಂತರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಳು.


 ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಹಿಂಸೆ ಅನುಭವಿಸಿದ್ದಳು. ವಿಡಿಯೋ ಬಹಿರಂಗವಾದ ಬಳಿಕ ಆಕೆ ಹಾಗೂ ಆಕೆಯ ಕುಟುಂಬದ ಮರ್ಯಾದೆಗೆ ಧಕ್ಕೆಯಾಗಿದೆ. ಎಂದು ನ್ಯಾಯಾಲಯಕ್ಕೆ ವಿವರಿಸಿದರು.

ಅಪರಾಧಿ ಪ್ರಭಾವಿಯಾಗಿದ್ದು ಸಾಕ್ಷ್ಯಾಧಾರ ನಾಶಕ್ಕೆ ಪ್ರಯತ್ನಿಸಲಾಗಿದೆ. ಅಪರಾಧಿಯ ಕುಟುಂಬದವರು ಸಂತ್ರಸ್ತೆಯನ್ನೇ ಅಪಹರಿಸಿ, ತಮಗೆ ಬೇಕಾದ ರೀತಿ ಹೇಳಿಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತೆಗೆ ಬೆದರಿಕೆಯೊಡ್ಡಿ ಸಾಕ್ಷ್ಯನಾಶಕ್ಕೆ ಯತ್ನಿಸಲಾಗಿದೆ. ಇವೆಲ್ಲವೂ ಗಂಭೀರ ಅಪರಾಧವಾಗಿದೆ.

ಸಾಲದಕ್ಕೆ ಕೋರ್ಟ್ ವಿಚಾರಣೆಯನ್ನೂ ವಿಳಂಬ ಮಾಡುವ ಯತ್ನವೂ ನಡೆದಿತ್ತು. ಅಪರಾಧಿಯ ಮೇಲೆ ಮತ್ತಷ್ಟು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಬೇರೆ ಬೇರೆ ಮಹಿಳೆಯರ ಮೇಲಿನ ಅತ್ಯಾಚಾರದ ವಿಡಿಯೋಗಳಿವೆ. ಹಣ ಅಧಿಕಾರ ಇರುವ ಇವರಿಗೆ ಕಡಿಮೆ ಶಿಕ್ಷೆಯಾಗಬಾರದು. ಅಪರಾಧಿಗೆ ಯಾವುದೇ ರೀತಿ ಕನಿಕರ ತೋರಬಾರದು.

ಅಪರಾಧಿಯ ವಕ್ರ ಮನಸ್ಥಿತಿ ಗಮನದಲ್ಲಿಟ್ಟುಕೊಳ್ಳಬೇಕು. ಗರಿಷ್ಠ ಪ್ರಮಾಣದ ಶಿಕ್ಷೆಯನ್ನೇ ಅಪರಾಧಿ ಪ್ರಜ್ವಲ್ ರೇವಣ್ಣಗೆ ನೀಡಬೇಕು. ಜೀವನಪರ್ಯಾಂತ ಸೆರೆವಾಸದ ಶಿಕ್ಷೆ ವಿಧಿಸಬೇಕು ಎಂದು ಎಸ್‌ಪಿಪಿ ಬಿ. ಎನ್. ಜಗದೀಶ್ ಅವರು ನ್ಯಾಯಲಯಕ್ಕೆ ಮನವಿ ಮಾಡಿದರು.

ವಕೀಲ ಅಶೋಕ್ ನಾಯಕ್ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿ ಪ್ರಜ್ವಲ್ ಬಡವನಲ್ಲ, ಕೋಟ್ಯಧಿಪತಿಯಾಗಿದ್ದಾರೆ. ಆದ್ದರಿಂದ, ಸೆಕ್ಷನ್ 357ರ ಅಡಿಯಲ್ಲಿ ಹೆಚ್ಚಿನ ಮೊತ್ತದ ದಂಡ ವಿಧಿಸಿ, ಅದರ ಬಹುಭಾಗವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಬೇಕು. ವಿಡಿಯೋ ಬಹಿರಂಗಗೊಂಡ ಬಳಿಕ ಆಕೆ ಹೊರಗೆ ದುಡಿಯಲು ಹೋಗದಂತಾಗಿದೆ. ಆದ್ದರಿಂದ, ಗರಿಷ್ಠ ಪ್ರಮಾಣದ ಶಿಕ್ಷೆ ನೀಡಬೇಕು ಎಂದು ವಾದ ಮಂಡಿಸಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರಜ್ವಲ್ ಪರ ವಾದ ಮಂಡಿಸಿದ ವಕೀಲರಾದ ನಳೀನಾ ಮಾಯೇಗೌಡ, ಯುವ ಸಂಸದನಾಗಿ ಪ್ರಜ್ವಲ್ ಜನಸೇವೆ ಮಾಡಿದ್ದಾರೆ. ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕಾರಣಕ್ಕೆ ಬಂದವರಲ್ಲ. ಆರೋಪಿಯ ರಾಜಕೀಯ ಸ್ಥಾನಮಾನ ಶಿಕ್ಷೆಗೆ ಕಾರಣವಾಗಬಾರದು. ಇಷ್ಟು ದಿನ ಅವರು ಸಂಪಾದಿಸಿದ್ದ ಒಳ್ಳೆಯ ಹೆಸರು ಏನಾಗಬೇಕು. ಸಂತ್ರಸ್ತೆ ಸಮಾಜದಿಂದ ತಿರಸ್ಕೃತಗೊಂಡವರಲ್ಲ.

ಸಂಸಾರದೊಂದಿಗೆ ಎಂದಿನಂತೆ ಜೀವನ ಸಾಗಿಸುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿಯೇ ವಿಡಿಯೋ ಹರಿಬಿಡಲಾಗಿದ್ದು, ಪ್ರಜ್ವಲ್ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ. ಪ್ರಜ್ವಲ್ ಯುವಕನಾಗಿದ್ದು ಆತನ ಭವಿಷ್ಯವನ್ನೂ ಗಮನಿಸಬೇಕು. ಈಗಾಗಲೇ ಮಾಧ್ಯಮಗಳಲ್ಲಿ ತೇಜೋವಧೆ ಆಗಿದೆ.

ವಯಸ್ಸಾದ ತಂದೆ-ತಾಯಿ ಇದ್ದಾರೆ. ಅವರ ತಾತ ಮಾಜಿ ಪ್ರಧಾನಿಯಾಗಿದ್ದಾರೆ. ನ್ಯಾಯಾಲಯ ವಿಧಿಸುವ ಶಿಕ್ಷೆಯಿಂದ ಪ್ರಜ್ವಲ್ ಅವರ ಭವಿಷ್ಯಕ್ಕೆ ಹಾನಿಯಾಗಬಾರದು ಎಂದು ವಕೀಲರು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಾಧೀಶರು, ಪ್ರಜ್ವಲ್ ಅವರನ್ನು ಕುರಿತು, ನೀವೇನಾದರೂ ಹೇಳಲು ಬಯಸುವಿರೇ ಎಂದು ಪ್ರಶ್ನಿಸಿದರು. ಅದಕ್ಕೆ ಕಣ್ಣೀರಿಡುತ್ತಲೇ ಪ್ರತಿಕ್ರಿಯಿಸಿದ ಪ್ರಜ್ವಲ್, ನಾನು ಹಲವು ಮಹಿಳೆಯರೊಂದಿಗೆ ಈ ಕೃತ್ಯವೆಸಗಿದ್ದೇನೆ ಎಂದು ಆರೋಪಿಸಲಾಗುತ್ತಿದೆ.

ಸಂಸದನಾದಾಗ ಯಾರೂ ಇಂಥ ಆರೋಪ ಮಾಡಿಲ್ಲ. ರೇಪ್ ಮಾಡಿದ್ದೇನೆಂದು ಯಾರೂ ಹೇಳಿಲ್ಲ. ಆರು ತಿಂಗಳಿಂದ ತಂದೆ-ತಾಯಿಯನ್ನು ನೋಡಿಲ್ಲ. ನಾನು ಮಾಡಿದ ಒಂದೇ ತಪ್ಪೇನೆಂದರೆ ರಾಜಕೀಯದಲ್ಲಿ ಬೇಗ ಬೆಳೆದದ್ದು. ಈ ವಿಚಾರದಲ್ಲಿ ಮಾಧ್ಯಮಗಳನ್ನೂ ದೂರುವುದಿಲ್ಲ. ಕೋರ್ಟ್ ಆದೇಶಕ್ಕೆ ತಲೆ ಬಾಗುತ್ತೇನೆ ಎಂದು ಭಾವುಕರಾಗಿ ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ