Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆಗೆ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಹೊಸ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಶಕಕ್ಕೂ ಹೆಚ್ಚು ಕಾಲದಿಂದ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಕೊನೆಗೂ ಅಧಿಕೃತ ಚಾಲನೆ ಸಿಕ್ಕಿದೆ.

ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಹಿರಿಯ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ಮಹತ್ವದ ಆದೇಶ ಹೊರಡಿಸಿದೆ.

Advertisement

 ತನಿಖಾ ತಂಡದ ಮುಖ್ಯಾಂಶಗಳು: ಎಸ್‌ಐಟಿ ನೇತೃತ್ವ: ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಎನ್. ಶಶಿಕುಮಾರ್ ಅವರಿಗೆ ಈ ಮಹತ್ವದ ತನಿಖಾ ತಂಡದ ನೇತೃತ್ವ ವಹಿಸಲಾಗಿದೆ.

ಸಮರ್ಥ ಅಧಿಕಾರಿಗಳ ನಿಯೋಜನೆ: ತನಿಖೆಗೆ ದಕ್ಷ ಹಾಗೂ ಅನುಭವಿ ಅಧಿಕಾರಿಗಳ ತಂಡವನ್ನು ನೇಮಿಸಲಾಗಿದ್ದು, ಇದರಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತದಳದ ಎಸ್.ಪಿ. ನಿಶಾ ಜೇಮ್ಸ್, ಸಿಐಡಿ ಎಸ್.ಪಿ. ಲೋಕೇಶ್ ಜಗಲಸಾರ್ ಹಾಗೂ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ಪ್ರಸನ್ನ ಅವರು ಸದಸ್ಯರಾಗಿದ್ದಾರೆ.

ಕಾಲಮಿತಿ: ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ, ಇಡೀ ತನಿಖಾ ಪ್ರಕ್ರಿಯೆ ಕೇವಲ ಮೂರು ತಿಂಗಳ ಕಾಲಮಿತಿಯೊಳಗೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಮಗ್ರ ವರದಿ ಸಲ್ಲಿಸಬೇಕಿದೆ.

ತಾಯಿಯ ದೀರ್ಘ ಕಾನೂನು ಹೋರಾಟ: ಅನ್ಯಾಯಕ್ಕೊಳಗಾದ ಮಗಳಿಗೆ ನ್ಯಾಯ ದೊರಕಿಸಿಕೊಡಲು ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಅವರು ಸುದೀರ್ಘ ಕಾನೂನು ಹೋರಾಟ ನಡೆಸುತ್ತಾ ಬಂದಿದ್ದಾರೆ. ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಹಿಂದಿನ ತನಿಖಾ ವೈಫಲ್ಯಗಳನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆಗೆ ಹೊಸ ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಪ್ರಕರಣದ ಹಿನ್ನೆಲೆ: ಘಟನೆ: 2012ರ ಅಕ್ಟೋಬರ್‌ನಲ್ಲಿ ಧರ್ಮಸ್ಥಳದಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರ ಅತ್ಯಾಚಾರ ಮತ್ತು ಬರ್ಬರ ಕೊಲೆ ನಡೆದಿತ್ತು.

ನ್ಯಾಯಾಲಯದ ತೀರ್ಪು: ಈ ಪ್ರಕರಣದಲ್ಲಿ ಸಂತೋಷ್‌ರಾವ್‌ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆದರೆ, ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಬಿಐ ವಿಶೇಷ ನ್ಯಾಯಾಲಯವು 2023ರಲ್ಲಿ ಆತನನ್ನು ದೋಷಮುಕ್ತಗೊಳಿಸಿತ್ತು.

ಮುಂದಿನ ಹಂತ: ಹೈಕೋರ್ಟ್‌ನಲ್ಲಿದ್ದ ಕಾನೂನು ಹೋರಾಟದ ಬಳಿಕ, ಕುಟುಂಬದ ಮೇಲ್ಮನವಿ ಅರ್ಜಿಯನ್ನು ಮಾನ್ಯ ಮಾಡಿರುವ ಸುಪ್ರೀಂ ಕೋರ್ಟ್ ಈಗ ಹೊಸದಾಗಿ ಎಸ್‌ಐಟಿ ತನಿಖೆಗೆ ಆದೇಶಿಸಿರುವುದು ನೈಜ ಅಪರಾಧಿಗಳಿಗೆ ಶಿಕ್ಷೆಯಾಗುವ ಆಶಾಭಾವನೆಯನ್ನು ಮತ್ತಷ್ಟು ಗರಿಗೆದರÜುವಂತೆ ಮಾಡಿದೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಚಾರಿಕತೆಯ ದಾರಿದೀಪ: ಡಾ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಮೃತ ಮಹೋತ್ಸವಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆಲವರ್‌ಬಾಯ್‌ಅವತಾರದಲ್ಲಿ ಬರುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ:  ಹೊಸ ಸಿನಿಮಾ 'ಕೆಮಿಸ್ಟ್ರಿ'!ಗಾಜಾ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಸಹ-ಪೈಲಟ್ ಒಮಾನ್ ಒಪ್ಪಿಗೆ!ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನ ಪ್ರಸ್ತಾವನೆ ಪಠಣ ಕಡ್ಡಾಯ ಕೋರಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ!ಇಂಡಿಯಾ ಬಣದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಬೃಹತ್ ಪಾದಯಾತ್ರೆಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ 1 ಕೋಟಿ ನಗದು ಪುರಸ್ಕಾರ, ಸರ್ಕಾರಿ ಹುದ್ದೆಗಳಲ್ಲಿ ಶೇ. 2 ಮೀಸಲಾತಿ: ಸರ್ಕಾರ!ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆ ಮಾಡದ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್ ಗರಂ!'ಇಂಡಿಯಾ' ಒಕ್ಕೂಟ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಪ್ರಮುಖ ನಾಯಕರು ವಶಕ್ಕೆ!ಪಂಚಮಸಾಲಿ ಮಠದಲ್ಲಿ ಅಕ್ಟೋಬರ್‌31ರವರೆಗೆ ನಿಷೇಧಾಜ್ಞೆ; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ