Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೀರ್ಘಕಾಲದಿಂದ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಗೂ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆದಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ಮರುತನಿಖೆಗೆ ಸೋಮವಾರ ಸೂಚಿಸಿರುವ ನ್ಯಾಯಾಲಯ, ಕೇವಲ ಮೂರು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಗಡುವು ವಿಧಿಸಿದೆ.

ಹಿನ್ನೆಲೆ ಮತ್ತು ಹೈಕೋರ್ಟ್ ತೀರ್ಪು:
ಈ ಕುಖ್ಯಾತ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ) ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿತ್ತಾದರೂ, ವಿಚಾರಣಾ ಹಂತದಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದರು. ಸಿಬಿಐ ತನಿಖೆಯ ಹಾಗೂ ತೀರ್ಪಿನ ಅಂತಿಮ ಫಲಿತಾಂಶವನ್ನು ಪ್ರಶ್ನಿಸಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದರಿಂದ ನಿರಾಶರಾಗದ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ (SLP) ದಾಖಲಿಸಿ ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದ್ದರು.

Advertisement

ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ: ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು ಸಿಬಿಐ ತನಿಖೆಯ ವೈಖರಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಜುಲೈ ತಿಂಗಳಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ, "ಈ ಪ್ರಕರಣದ ತನಿಖೆ ಅತ್ಯಂತ ಕಳಪೆಯಾಗಿದೆ. ಯಾವುದೇ ಹೊಸ ಅಥವಾ ಸ್ವತಂತ್ರ ತನಿಖೆಯನ್ನು ನಡೆಸದೆ, ಕೇವಲ ಹಿಂದಿನ ಪೊಲೀಸರ ತನಿಖೆಯನ್ನೇ ಆಧರಿಸಿ ಸಿಬಿಐ ವರದಿ ಸಿದ್ಧಪಡಿಸಿದೆ" ಎಂದು ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್ ಸಚ್‌ದೇವ್ ಅವರನ್ನೊಳಗೊಂಡ ಪೀಠವು ಮೌಖಿಕವಾಗಿ ಕಟು ಟೀಕೆಗಳನ್ನು ಮಾಡಿತ್ತು. "ವಾಸ್ತವವಾಗಿ, ಸಿಬಿಐನ ತನಿಖಾಧಿಕಾರಿ ಸ್ವತಂತ್ರ ತನಿಖೆ ನಡೆಸುವ ಬದಲು ನ್ಯಾಯಾಧೀಶರಂತೆ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆ ಸಂಗ್ರಹಿಸಲಾದ ಸಾಕ್ಷ್ಯಗಳನ್ನು ಮಾತ್ರ ಮರುಪರಿಶೀಲಿಸಿ ವರದಿ ಸಲ್ಲಿಸಿದ್ದಾರೆ" ಎಂದು ಅಸಮಾಧಾನ ವ್ಯಕ್ತಪಡಿಸಿ ತೀರ್ಪನ್ನು ಕಾಯ್ದಿರಿಸಿತ್ತು.

ಮೂರು ತಿಂಗಳ ಒಳಗೆ ವರದಿ ಸಲ್ಲಿಕೆಗೆ ಸೂಚನೆ: ಸೌಜನ್ಯಾ ಕುಟುಂಬದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈಗ ಸುಪ್ರೀಂ ಕೋರ್ಟ್ ಹಳೆಯ ಆದೇಶವನ್ನು ಮರುಪರಿಶೀಲಿಸಿ ಪ್ರಕರಣದ ಸಮಗ್ರ ಮರುತನಿಖೆಗೆ ಹಸಿರು ನಿಶಾನೆ ತೋರಿದೆ. ನಿಗದಿತ ಮೂರು ತಿಂಗಳ ಅವಧಿಯೊಳಗೆ ತನಿಖೆಯನ್ನು ಮುಕ್ತಾಯಗೊಳಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ತನಿಖಾ ತಂಡಕ್ಕೆ ಸೂಚನೆ ನೀಡಲಾಗಿದ್ದು, ರಾಜ್ಯದ ಜನತೆ ಹಾಗೂ ಸಂತ್ರತೆಯ ಕುಟುಂಬಕ್ಕೆ ಹೊಸ ಆಶಾಕಿರಣ ಮೂಡಿದೆ.

ಮುಖ್ಯ ಗಮನ: ಸುಪ್ರೀಂ ಕೋರ್ಟ್‌ನ ಈ ನಿರ್ಣಯದಿಂದಾಗಿ ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಸೌಜನ್ಯಾ ಪ್ರಕರಣಕ್ಕೆ ಮರು ಜೀವ ಬಂದಂತಾಗಿದ್ದು, ನೈಜ ಅಪರಾಧಿಗಳಿಗೆ ಶಿಕ್ಷೆಯಾಗುವ ನಿರೀಕ್ಷೆ ಗರಿಗೆದರಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿಬರ ಪರಿಹಾರದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಬಿ. ವೈ. ವಿಜಯೇಂದ್ರ