ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ ಒತ್ತಾಯಿಸಿದ್ದಾರೆ.
ಚಾಮರಾಜನಗರದಿಂದ ನಾಲ್ಕನೆ ಬಾರಿಗೆ ಸಿ.ಪುಟ್ಟರಂಗಶೆಟ್ಟಿ ಉಪ್ಪಾರ ಸಮಾಜದಿಂದ ಏಕೈಕ ಶಾಸಕರಾಗಿದ್ದು, ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡುವ ಮೂಲಕ ನಮ್ಮ ಜನಾಂಗಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್‌ರವರಲ್ಲಿ ಮನವಿ ಮಾಡಿರುವ ಆರ್.ಮೂರ್ತಿ ಹಿಂದಿನಿಂದಲೂ ನಮ್ಮ ಸಮಾಜ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬರುತ್ತಿದೆ.
ರಾಜ್ಯದಲ್ಲಿ ನಲವತ್ತೈದು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ಉಪ್ಪಾರ ಸಮಾಜ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಮತ ನೀಡಬೇಕಾದರೆ ಸಿ.ಪುಟ್ಟರಂಗಶೆಟ್ಟಿರವರಿಗೆ ಸಚಿವ ಸ್ಥಾನ ಸಿಗಲೇಬೇಕೆಂದು ಆಗ್ರಹಿಸಿದ್ದಾರೆ.



