LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳೆ ನಷ್ಟದ ಭೀತಿ ಎದುರಿಸಲು ರೈತರಿಗೆ ಬೆಳೆ ವಿಮೆಯೇ ಪರಿಹಾರ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನಲ್ಲಿ ಈ ಬಾರಿ ತೀವ್ರ ಮಳೆ ಕೊರತೆ ಉಂಟಾಗಿದ್ದು
, ಇಡೀ ತಾಲ್ಲೂಕಿನಲ್ಲಿ ಶೇಕಡಾ 10% ರಷ್ಟು ಮಾತ್ರ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಮುಂಬರುವ ದಿನಗಳಲ್ಲಿ ಮಳೆಯಾಗಿ ರೈತರು ಬಿತ್ತನೆ ಮಾಡಿದರೂ ಸಹ, 'ಎಲ್ ನಿನೋ' ಪ್ರಭಾವದಿಂದಾಗಿ ಅನಾವೃಷ್ಟಿ (ಬರಗಾಲ) ತಲೆದೋರುವ ಸಾಧ್ಯತೆಗಳು ಹೆಚ್ಚಾಗಿವೆ. ಇದರಿಂದ ಬೆಳೆಗಳು ಒಣಗಿ ಇಳುವರಿ ಕುಸಿಯುವ ಭೀತಿ ಎದುರಾಗಿದ್ದು, ರೈತರು ಎದುರಾಗಬಹುದಾದ ಆರ್ಥಿಕ ನಷ್ಟದಿಂದ ಪಾರಾಗಲು 'ಬೆಳೆ ವಿಮೆ ಯೋಜನೆ'ಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್ ಮನವಿ ಮಾಡಿದ್ದಾರೆ.

ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನಾಂಕವಾಗಿದ್ದು, ಅರ್ಹ ರೈತರೆಲ್ಲರೂ ತಕ್ಷಣವೇ ವಿಮೆ ಮಾಡಿಸಬೇಕಾಗಿ ಅವರು ವಿನಂತಿಸಿದ್ದಾರೆ.

ಗ್ರಾಮಗಳಲ್ಲಿ ಜಾಗೃತಿ ಅಭಿಯಾನ:
ರೈತರಲ್ಲಿ ಅರಿವು ಮೂಡಿಸಲು ಕೃಷಿ ಇಲಾಖೆಯ ಅಧಿಕಾರಿಗಳು ಸ್ವತಃ ಗ್ರಾಮಗಳಿಗೆ ಭೇಟಿ ನೀಡಿ ಜಾಗೃತಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದರ ಜೊತೆಗೆ.

 

ಸ್ವಚ್ಛತಾ ವಾಹನಗಳ ಮೂಲಕ ಪ್ರಚಾರ: ಗ್ರಾಮ ಪಂಚಾಯತಿಗಳ ಸ್ವಚ್ಛತಾ ವಾಹನಗಳಲ್ಲಿ ಮೈಕ್ ಗಳ ಮೂಲಕ ಬೆಳೆ ವಿಮೆಯ ಜಾಗೃತಿ ಸಂದೇಶಗಳನ್ನು ಬಿತ್ತರಿಸಲಾಗುತ್ತಿದೆ.

ಶಾಲೆ-ಕಾಲೇಜುಗಳಲ್ಲಿ ಅರಿವು: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬೆಳೆ ವಿಮೆಯ ಮಹತ್ವದ ಬಗ್ಗೆ ಮಾಹಿತಿ ನೀಡಿ, ತಮ್ಮ ಮನೆಯಲ್ಲಿರುವ ರೈತ ತಂದೆ-ತಾಯಂದಿರಿಗೆ ತಿಳಿಸುವಂತೆ ಪ್ರೇರೇಪಿಸಲಾಗುತ್ತಿದೆ.

ಪ್ರಕೃತಿ ವಿಕೋಪ ಮತ್ತು ಬರಗಾಲದಿಂದಾಗುವ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಲು ಪ್ರತಿಯೊಬ್ಬ ರೈತರು ಜುಲೈ 31ರ ಒಳಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಿಎಸ್‌ಸಿ ಕೇಂದ್ರ ಅಥವಾ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬೇಕಾಗಿ ಕೃಷಿ ಇಲಾಖೆ ಅಧಿಕಾರಿ ಅಶೋಕ್ ಕೋರಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್