Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರಿಗೆ ಗೌರವ ನೀಡುವ ಮೂಲಕ ಸಂಸ್ಕೃತಿ, ಸಂಸ್ಕಾರ ಜೀವಂತವಾಗಿದೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳೆಯರಿಗೆ ಗೌರವ ಸಲ್ಲಿಸುವ ಹಾಗೂ ಅವರ ಸಾಧನೆಗಳನ್ನು ಗೌರವಿಸುವ ದಿನವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಬದಲಾಗುತ್ತಿದೆ ಎಂದು ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಜೈ ಹಿಂದ್ ಪ್ರತಿಷ್ಠಾನದ ಉಪಾಧ್ಯಕ್ಷೆ ಕೆವಿ  ನಾಗರತ್ನ ತಿಳಿಸಿದರು.

ಅವರು ಬೆಂಗಳೂರಿನ ನಾಗರಭಾವಿ ಶ್ರೀ ವೇಣುಗೋಪಾಲ ಸ್ವಾಮಿ ಸಮುದಾಯ ಭವನದಲ್ಲಿ ಜೈ ಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಯೂಥ್ ಕ್ಲಬ್ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿ ಜೈ ಹಿಂದ್ ಪ್ರತಿಷ್ಠಾನ ಹಲವಾರು ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸುಮಾರು 3000ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಿರಂತರವಾಗಿ ನೆರವೇರಿಸಿಕೊಂಡು ಬಂದಿದೆ ಚಾಮರಾಜನಗರ ಜಿಲ್ಲೆಯಲ್ಲಿ ಸದಾಕಾಲ ಕ್ರಿಯಾಶೀಲವಾಗಿ ಹಲವಾರು ಕಾರ್ಯಕ್ರಮವನ್ನು ರೂಪಿಸಿ ಜಾಗೃತಿ ಮೂಡಿಸುತ್ತಿರುವ ಜೈ ಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಕ್ಲಬ್ ಮತ್ತಷ್ಟು ಸಾಧನೆಯನ್ನು ಮಾಡಲಿ ಎಂದರು.

ಜೈಹಿಂದ್ ಪ್ರತಿಷ್ಠಾನದಿಂದ ಮಹಿಳೆಯರಿಗೆ ಹೂಗುಚ್ಚ ನೀಡಿ ಶುಭಾಶಯಗಳನ್ನು ಸಲ್ಲಿಸಲಾಯಿತು. ಚಿಂತಕ ,ಉಪನ್ಯಾಸಕ ,ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್ ಋಗ್ವೇದಿ ಮಾತನಾಡಿ ಮಾತೃ ಸ್ವರೂಪಿಯಾದ ತಾಯಿಯ ಋಣ ತೀರಿಸುವುದು ಅಸಾಧ್ಯ.

 ಭಾರತೀಯರಾದ ನಾವೆಲ್ಲರೂ ಪುಣ್ಯವಂತರು. ನಮ್ಮ ತಾಯಿನಾಡು ಭಾರತ. ಮಾತೃ ಸ್ವರೂಪವಾದ ಭಾರತಮಾತೆಯ ಮಕ್ಕಳಾಗಿದ್ದೇವೆ. ತಾಯಿಯ ಗರ್ಭದಲ್ಲಿ ಜನಿಸುವ ಮೂಲಕ ಮಾತೃ ರಕ್ಷಣೆಯಲ್ಲಿ ಜೀವನವನ್ನು ನಿರ್ವಹಿಸುತ್ತೇವೆ .ಪ್ರತಿಕ್ಷೇತ್ರದಲ್ಲೂ ಭಾರತೀಯರು ಮಹಿಳೆಯರಿಗೆ ಅಪಾರ ಗೌರವವನ್ನು ನೀಡುವ ಮೂಲಕ ಸಂಸ್ಕೃತಿ ,ಸಂಸ್ಕಾರ, ಸಮರ್ಪಣೆಯ ಭಾವವನ್ನು ಜೀವನದಲ್ಲಿ ತುಂಬಿಕೊಳ್ಳುವ ಮೂಲಕ ತಾಯಿಗೆ ಗೌರವವನ್ನು ಸಲ್ಲಿಸಬೇಕು.  ಮಹಿಳೆಯರ ಋಣವನ್ನು ತೀರಿಸುವುದು ಅಸಾಧ್ಯ.

ತಾಯಿಯಾಗಿ, ಅಕ್ಕನಾಗಿ ಹೆಂಡತಿಯಾಗಿ ,ತಂಗಿಯಾಗಿ ಹಲವು ಸ್ವರೂಪದಲ್ಲಿ ಮಾತೃ ರೂಪದಲ್ಲಿ ಕಾಣಿಸಿಕೊಳ್ಳುವ ಮಹಿಳೆಯರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಗೌರವವನ್ನು ನೀಡಬೇಕು .ಪ್ರತಿಯೊಬ್ಬ ಮಹಿಳೆಯರ ಕೊಡುಗೆ ಅಪಾರ. ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರ ಕೊಡುಗೆ ವರ್ಣಿಸಲು ಅಸಾಧ್ಯ. ವಿಜ್ಞಾನ ,ತಂತ್ರಜ್ಞಾನ , ಬಾಹ್ಯ ಕಾಶ,ಸಂಶೋಧನೆ, ಶಿಕ್ಷಣ, ಆರೋಗ್ಯ ,ನೀರಾವರಿ, ಕೈಗಾರಿಕೆ ಹತ್ತು ಹಲವು ಕ್ಷೇತ್ರಗಳಲ್ಲಿ ಅದ್ಭುತ ಸಾಧನೆಯನ್ನು ಮಹಿಳೆಯರು ಸಾಧಿಸುತ್ತಿದ್ದಾರೆ .ಶಿಕ್ಷಣದಲ್ಲೂ ಅಪಾರ ಜ್ಞಾನ ಪಡೆಯುತ್ತಿರುವ ಹೆಣ್ಣು ಮಕ್ಕಳಿಂದ ಭಾರತ  ಸಮೃದ್ಧ ರಾಷ್ಟ್ರವಾಗಿ ವಿಶ್ವಕ್ಕೆ ಜಗದ್ಗುರುವಾಗಿ ರೂಪಿತವಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆವಿ ನಾಗರತ್ನ, ಗುಂಡ್ಲುಪೇಟೆ ರಮೇಶ್, ಜಗನ್ನಾಥ, ಕುಸುಮಾ ಋಗ್ವೇದಿ, ಆಶಾರಾವ್, ರಕ್ಷಾದೀಪಕ್, ಶರಣ್ಯ, ಸಾನಿಕ, ಸಿಂಚನ, ಶ್ರಾವ್ಯ, ಜಗನ್ನಾಥ್ , ಕಾರ್ತಿಕ್, ಸುಹಾಸ್  ಭಾರದ್ವಾಜ್,ಧನುಷ್, ವರ್ಚಸ್ ಇದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ