ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನವದೆಹಲಿಯ ಇಂದಿರಾ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಮುಖಂಡರೊಂದಿಗೆ ಪ್ರಮುಖ ಸಮಾಲೋಚನೆ ನಡೆಸಿದರು.
ಸಭೆಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ಅನುಮುಲ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಸೌಹಾರ್ದಯುತ ಚರ್ಚೆ ನಡೆಸಿದರು.
ಈ ವೇಳೆ ನಾಯಕರು ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆಗಳ ಕುರಿತು ಅನೌಪಚಾರಿಕವಾಗಿ ವಿಚಾರ ವಿನಿಮಯ ಮಾಡಿಕೊಂಡರು.




