ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರರು, ಮಾಜಿ ಮುಖ್ಯಮಂತ್ರಿ ಶ್ರೀ ಡಿ.ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ ಸಮಾರಂಭವನ್ನು ಇದೇ ಆಗಸ್ಟ್ 20ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ಆರ್ ತಂಗಡಗಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ,
ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಆಯುಕ್ತ ಕೆ.ಎ.ದಯಾನಂದ ಭಾಗವಹಿಸುವರು. ಡಿ.ದೇವರಾಜ ಅರಸುರವರ ತತ್ವ ಮತ್ತು
ಚಿಂತನೆಗಳ ಬಗ್ಗೆ ಎಸ್‍ಜೆಎಂ ಕಾಲೇಜು ಉಪನ್ಯಾಸಕ ಎಸ್.ಲಕ್ಷ್ಮಿಕಾಂತ್ ಉಪನ್ಯಾಸ ನೀಡುವರು. ವಿಶೇಷ ಆಹ್ವಾನಿತರಾಗಿ ಶಿಕ್ಷಕ ತಜ್ಞ ಆರ್.ಎ.ಚೇತನ್ ರಾಮ್ ಅವರಿಂದ ಮೌಲ್ಯಾಧಾರಿತ ಶಿಕ್ಷಣ ಮತ್ತು ಸ್ವ ಅಭಿವೃದ್ಧಿಯ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಪುಷ್ಪಲತಾ ಭಾವಿಮಠ ತಿಳಿಸಿದ್ದಾರೆ.



