LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾವಿನಲ್ಲೂ ಸಾರ್ಥಕತೆ ಮೆರೆದ ದಗ್ಗೆ ಪ್ರದೀಪ್ ಕುಟುಂಬ: ನೇತ್ರದಾನ ಮಾಡುವ ಮೂಲಕ ಇತರರಿಗೆ ಬೆಳಕಾದ ಯುವಕ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಅಪಘಾತದಲ್ಲಿ ಯುವಕನೊಬ್ಬ ಅಕಾಲಿಕ ಮರಣ ಹೊಂದಿದ ದುಃಖದ ನಡುವೆಯೂ
, ಆತನ ನೇತ್ರಗಳನ್ನು ದಾನ ಮಾಡುವ ಮೂಲಕ ಕುಟುಂಬದವರು ಸಾವಿನಲ್ಲೂ ಸಾರ್ಥಕತೆ ಮೆರೆದ ಹೃದಯಸ್ಪರ್ಶಿ ಘಟನೆ ಸಂಭವಿಸಿದೆ.

ಘಟನೆಯ ವಿವರ:
ಬುಧವಾರದಂದು ಟೀ ನೂಲೇನೂರು ಗೇಟ್‌ಬಳಿಯ ಅಂಗಡಿಯೊಂದರ ಮುಂದೆ ನಿಂತಿದ್ದ ದಗ್ಗೆ ಗ್ರಾಮದ ನಿವಾಸಿ ಪ್ರದೀಪ್ ಅವರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ
, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಸಾವಿನಲ್ಲೂ ಸಾರ್ಥಕತೆ - ನೇತ್ರದಾನ:
ಕುಟುಂಬಕ್ಕಿದ್ದ ಒಬ್ಬನೇ ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿದ್ದರೂ
, ಪ್ರದೀಪ್ ಅವರ ಕುಟುಂಬದವರು ಸಾವಿನ ನಂತರವೂ ಬೇರೆಯವರ ಬಾಳಿಗೆ ಬೆಳಕಾಗಲಿ ಎಂಬ ಉದಾತ್ತ ಉದ್ದೇಶದಿಂದ ಕಣ್ಣುಗಳನ್ನು ದಾನ ಮಾಡಲು ಮುನ್ನೆಡೆದರು. ಆಸ್ಪತ್ರೆಯ ವೈದ್ಯರ ನೆರವಿನಿಂದ ನೇತ್ರದಾನ ಪ್ರಕ್ರಿಯೆ ಪೂರ್ಣಗೊಂಡಿತು. ದುಃಖದ ಮಡುವಿನಲ್ಲೂ ಇಂತಹ ಮಾದರಿ ನಿರ್ಧಾರ ಕೈಗೊಂಡ ಪ್ರದೀಪ್ ಅವರ ಕುಟುಂಬಕ್ಕೆ ದಗ್ಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿ ಗೌರವ ವ್ಯಕ್ತಪಡಿಸಿದ್ದಾರೆ.

ಮನೆಯವರ ಅಕ್ರಂದನ:
ಮೃತ ಪ್ರದೀಪ್ ಅವರು ತಂದೆಗೆ ಒಬ್ಬನೇ ಮಗನಾಗಿದ್ದು
, ಅವರಿಗೆ ನಾಲ್ಕು ವರ್ಷದ ಎಳೆಯ ಗಂಡು ಮಗುವಿದೆ. ಕುಟುಂಬದ ಆಸರೆಯಾಗಿದ್ದ ಯುವಕನ ಅಗಲಿಕೆಯಿಂದ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದ್ದು, ನೋಡುಗರ ಕಣ್ಣು ತೇವಗೊಳಿಸಿತು. ಪ್ರದೀಪ್ ಅವರ ಅಂತ್ಯಕ್ರಿಯೆಯು ಬುಧವಾರ ಸಂಜೆ ಅವರ ಸ್ವಂತ ತೋಟದಲ್ಲಿ ನೆರವೇರಿತು.

ಮತ್ತೊಬ್ಬರಿಗೆ ತೀವ್ರ ಗಾಯ:
ಇದೇ ಅಪಘಾತದ ಸಂದರ್ಭದಲ್ಲಿ ನೂಲೇನೂರು ಗ್ರಾಮದ ದಲಿತ ಕುಟುಂಬದ ದಿವಾಂಗತ ಮೂರ್ತಿಯವರ ಮಗಳ ಕಾಲಿನ ಮೇಲೆಯೂ ಕಾರು ಹರಿದಿದ್ದು
, ಆಕೆಯ ಕಾಲು ಕಡಿತಗೊಂಡು ತೀವ್ರ ಗಾಯಗೊಂಡಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ..

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು