ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ಆಗಸ್ಟ್ 20 ಮತ್ತು 21ರಂದು ಬೆಳಿಗ್ಗೆ 10 ರಿಂದ 5.30 ರವರೆಗೆ ವೈಜ್ಞಾನಿಕ ಹೈನುಗಾರಿಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್ ಹಾಗೂ 2 ಪಾಸ್‍ಪೋರ್ಟ್ ಸೈಜ್ ಅಳತೆಯ ಭಾವಚಿತ್ರಗಳನ್ನು ತರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣಪತ್ರವನ್ನು ತರುವುದು ಕಡ್ಡಾಯ. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಪೆÇ್ರೀತ್ಸಾಹಧನ ನೀಡಲಾಗುವುದಿಲ್ಲ.
ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಅರ ದೂರವಾಣಿ ಸಂಖ್ಯೆ 9886803637, 9886002248, 9972965479 ಸಂಖ್ಯೆಗಳನ್ನು ಸಂಪರ್ಕಿಸಬಹುದು. ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.



