Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್,  ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು ಪಡಿಸಿದ ಸುಪ್ರೀಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್,  ಪವಿತ್ರಾ ಗೌಡ ಸೇರಿ ಇತರೆ 7 ಮಂದಿ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿಸಿದೆ.


ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಆದೇಶ ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ಹೊರಬಿದ್ದಿದೆ.
ಸುಪ್ರೀಂ ಕೋರ್ಟ್​ ಜಸ್ಟೀಸ್ ಜೆ.ಬಿ.ಪರ್ದಿವಾಲಾ
, ಜಸ್ಟೀಸ್ ಮಹದೇವನ್​ ಅವರು ಇದ್ದ ಪೀಠವು ಅರ್ಜಿ ವಿಚಾರಣೆ ನಡೆಸಿ ಈ ಮಹತ್ವದ ತೀರ್ಪು ನೀಡಿದೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಎ1 ಪವಿತ್ರಾಗೌಡ, 2 ದರ್ಶನ್, 6 ಜಗದೀಶ್ ಅಲಿಯಾಸ್ ಜಗ್ಗ, 7 ಅನುಕುಮಾರ್ ಅಲಿಯಾಸ್ ಅನು, 14 ಪ್ರದೋಶ್ , 11 ನಾಗರಾಜು ಅಲಿಯಾಸ್ ನಾಗ, 12 ಲಕ್ಷ್ಮಣ್ ಇವರುಗಳ ಜಾಮೀನುನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ.

ಏನಿದು ಪ್ರಕರಣ-
ಕೊಲೆಯಾದ ಮೃತ ಚಿತ್ರದುರ್ಗದ ರೇಣುಕಾಸ್ವಾಮಿ ಆರೋಪಿ ನಟ ದರ್ಶನ್ ಅವರ ಅಪ್ಪಟ ಅಭಿಮಾನಿ. ನಟ ದರ್ಶನ್ ಜೊತೆ ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಇನ್​ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ರೇಣುಕಾಸ್ವಾಮಿಯನ್ನ ಚಿತ್ರದುರ್ಗದಿಂದ ಅಪಹರಿಸಿಕೊಂಡು ಹೋಗಿ ಬೆಂಗಳೂರಿನ
ಶೆಡ್​​​ ಒಂದರಲ್ಲಿ ಕೊಲೆ ಮಾಡಿದ್ದರು. ಕೊಲೆ ನಡೆದ ಸ್ಥಳದಲ್ಲಿನ ಮಣ್ಣಿನ ಮಾದರಿ, ದರ್ಶನ್, A4 ರಾಘವೇಂದ್ರ, ನಂದೀಶ್ ಮತ್ತು ನಾಗರಾಜು ಪಾದರಕ್ಷೆಗಳಲ್ಲಿ ಸಿಕ್ಕ ಮಾದರಿ ಹೊಂದಾಣಿಕೆ ಆಗಿದೆ. ಡಿಎನ್​ಎಯಲ್ಲೂ ಮೃತನ ರಕ್ತದ ಕಲೆಗಳು ಕೆಲ ಆರೋಪಿಗಳ ಬಟ್ಟೆಗಳ ಮೇಲೆ ಇದೆ. ಕೊಲೆ ನಡೆದ ಸಮಯದಲ್ಲಿ ಪವಿತ್ರಾ ಗೌಡ ಮತ್ತು A2 ದರ್ಶನ್  ಭಾಗಿ ಆಗಿದ್ದಾರೆ.

ಹೈಕೋರ್ಟ್ ಜಾಮೀನು ನೀಡಿದ್ದು ಸರಿ ಇಲ್ಲ, ದಾಖಲೆಗಳಿಗೆ ವಿರುದ್ಧ ತೀರ್ಪು ನೀಡಲಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂದಿರೋದು ತಪ್ಪು. ಮೃತನ ರೇಣುಕಾಸ್ವಾಮಿ ಮೈ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಸಾಕ್ಷಿ ಹೇಳಿಕೆ ತಡವಾಗಿ ದಾಖಲಿಸಲಾಗಿದೆ ಅಂತ ಅನುಮಾನಿಸಿದ್ದು ಸರಿಯಲ್ಲ. ವಿಳಂಬಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ.

ಸೂಕ್ತ ಎಫ್​​ಎಸ್​ಎಲ್, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳಿವೆ  ಎಂದು ಪರಿಗಣಿಸಿಲ್ಲ. ಜಾಮೀನು ವಿಚಾರಣೆ ಹಂತದಲ್ಲಿ ಹೈಕೋರ್ಟ್ ಮಿನಿ ಟ್ರಯಲ್ ನಡೆಸಿದೆ. ಕೊಲೆ ಆರೋಪಿ ದರ್ಶನ್​ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವು ಅಂತ ಕೋರ್ಟ್​​​ ಹಾಜರಾಗೋದ್ರಿಂದ ವಿನಾಯಿತಿ ಪಡೆದಿದ್ರು. ಮರು ದಿನವೇ ದರ್ಶನ್​​ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ ಎಂದು ಸರ್ಕಾರ ವಾದ ಮಂಡಿಸಿತ್ತು.

ರಮ್ಯಾ ಪ್ರತಿಕ್ರಿಯೆ-
ಸುಪ್ರೀಂ ಕೋರ್ಟ್ ಆರೋಪಿ ದರ್ಶನ್ ಸೇರಿ ಇತರೆ 7 ಮಂದಿ ಜಾಮೀನು ರದ್ದು ಆದೇಶದ ಬೆನ್ನಲ್ಲೇ ಮಾಜಿ ಸಂಸದೆ, ನಟಿ ರಮ್ಯಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಅವರು ಬರೆದುಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶವನ್ನು ರವಾನಿಸುತ್ತದೆ ಎಂದಿದ್ದಾರೆ ರಮ್ಯಾ. ನ್ಯಾಯಯುತವಾಗಿ ಪ್ರಕ್ರಿಯೆಯನ್ನು ಅನುಸರಿಸಿ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ಇದು ದೀರ್ಘ ಮತ್ತು ಕಠಿಣ. ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ ಎಂಬ ನಂಬಿಕೆ ಇರಲಿ ಎಂದು ನಾನು ಇತರರಿಗೆ ಹೇಳುತ್ತೇನೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಕ್ಕೇ ಸಿಗುತ್ತದೆ. ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೋರಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ