Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ದಾವಣಗೆರೆ ಯುವತಿ ಹೈಡ್ರಾಮಾ; ಪ್ರಶ್ನಿಸಿದ ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು ದರ್ಪ!

Advertisement
Advertisement

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ವಿದ್ಯಾಕಾಶಿ ದಾವಣಗೆರೆಯಲ್ಲಿ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ರಂಪಾಟ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆಯೇ ಆಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾಳೆ.

ನಗರದ ಪ್ರಮುಖ ರಸ್ತೆಯಾದ ಶಾಮನೂರು ರಸ್ತೆಯಲ್ಲಿ ಈ ಹೈಡ್ರಾಮಾ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ವೇಳೆ ರಂಪಾಟ:
ಯುವತಿಯು ತನ್ನ ಐಷಾರಾಮಿ 'ಥಾರ್' (Thar) ಕಾರಿನಲ್ಲಿ ಮದ್ಯ ಸೇವಿಸಿ ನಗರದ ರಸ್ತೆಯಲ್ಲಿ ಅಡ್ಡಾದಿಡ್ಡಿ ಚಲಾಯಿಸುತ್ತಿದ್ದಳು. ಇದೇ ವೇಳೆ ಅದೇ ಮಾರ್ಗದಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದರು. ಅನುಮಾನಗೊಂಡು ಪೊಲೀಸರು ಆಕೆಯ ಕಾರನ್ನು ತಡೆದು ನಿಲ್ಲಿಸಿದ್ದಾರೆ.

ಕಾರು ನಿಲ್ಲಿಸುತ್ತಿದ್ದಂತೆ ಕೆರಳಿದ ಯುವತಿ, ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದಾಳೆ. ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಅವರು ಆಕೆಯನ್ನು ಸಮಾಧಾನಪಡಿಸಲು ಯತ್ನಿಸಿದಾಗ, ಯುವತಿ ಏಕಾಏಕಿ ಮಹಿಳಾ ಅಧಿಕಾರಿಗೆ ಕಾಲಿನಿಂದ ಒದ್ದು ತಳ್ಳಿದ್ದಾಳೆ. ಅಷ್ಟೇ ಅಲ್ಲದೆ, ಸ್ಥಳದಲ್ಲಿದ್ದ ಇತರೆ ಸಿಬ್ಬಂದಿ ಮೇಲೂ ಹಲ್ಲೆಗೆ ಮುಂದಾಗಿದ್ದಾಳೆ.

ಮೊಬೈಲ್‌ನಲ್ಲಿ ದೃಶ್ಯ ಸೆರೆ, ವಿಡಿಯೋ ವೈರಲ್!:
ಮದ್ಯದ ಅಮಲಿನಲ್ಲಿ ಯುವತಿ ನಡುರಸ್ತೆಯಲ್ಲೇ ಪೊಲೀಸರ ವಿರುದ್ಧ ದರ್ಪ ತೋರುತ್ತಾ, ಗಲಾಟೆ ಮಾಡುತ್ತಿದ್ದ ದೃಶ್ಯವನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ತಮ್ಮ ಮೊಬೈಲ್‌ಫೋನ್‌ಗಳಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ 'ಹೈಡ್ರಾಮಾ'ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ನೆಟ್ಟಿಗರು ಯುವತಿಯ ವರ್ತನೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ವಿದ್ಯಾನಗರ ಠಾಣೆಯಲ್ಲಿ ಕೇಸ್ ದಾಖಲು:
ಪೊಲೀಸ್ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಹಿನ್ನೆಲೆಯಲ್ಲಿ ಯುವತಿಯ ವಿರುದ್ಧ ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕಾನೂನು ರೀತ್ಯಾ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.