Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ: ಡಿಸಿ ಅನುರಾಧ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು
14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ  ಎಂದು ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧ ಅವರು ತಿಳಿಸಿದ್ದಾರೆ.

 ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಕ್ಯಾನ್ಸರ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳು ಬರದಂತೆ ತಡೆಯಬಹುದುಎಂದರು.

 ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಜಿಲ್ಲೆಯಲ್ಲಿ ಎಚ್.ಪಿ.ವಿ ಲಸಿಕಾಕರಣ  ಕಾರ್ಯಕ್ರಮ ಕೈಗೊಳ್ಳಲಾಗಿದೆ. ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 14ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಕಲಾಗುತ್ತದೆ. ಪೋಷಕರು ತಪ್ಪದೇ ತಮ್ಮ 14 ರಿಂದ 15 ವರ್ಷ ವಯೋಮಿತಿಯೊಳಗಿರುವ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದರು.

 ಜಿಲ್ಲೆಯಲ್ಲಿ ಸಮೀಕ್ಷಾ ವರದಿಯಂತೆ  14 ವರ್ಷದಿಂದ 15 ವರ್ಷದೊಳಗಿನ  12097 ಹೆಣ್ಣು ಮಕ್ಕಳಿದ್ದಾರೆ. ಇವರಿಗೆ ಲಸಿಕೆ ಹಾಕುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಈಗಾಗಲೇ 1803 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದ ಮಕ್ಕಳಿಗೆ ಕೂಡ ತಪ್ಪದೇ ಲಸಿಕೆ ಹಾಕಿಸಿ ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

 *ಎಚ್.ಪಿ.ವಿ ಲಸಿಕೆಗಳು ಸುರಕ್ಷಿತವೇ?* ಹೌದು. ಎಲ್ಲಾ ಲಸಿಕೆಗಳಂತೆ, HPV ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಬಹಳ ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡಲಾಗುತ್ತದೆ. ಅಧ್ಯಯನಗಳು HPV ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಪ್ರದರ್ಶಿಸಿವೆ. 2006 ರಲ್ಲಿ ಪರವಾನಗಿ ಪಡೆದ ನಂತರ, 50 ಕೋಟಿಗೂ ಹೆಚ್ಚು ಡೋಸ್ಗಳ HPV ಲಸಿಕೆಗಳನ್ನು ವಿತರಿಸಲಾಗಿದೆ. ಪರವಾನಗಿ ನಂತರದ ಕಣ್ಗಾವಲು ಅನಾಫಿಲ್ಯಾಕ್ಸಿಸ್ನ ಅಪರೂಪದ ವರದಿಗಳನ್ನು ಹೊರತುಪಡಿಸಿ ಇಲ್ಲಿಯವರೆಗೆ ಯಾವುದೇ ಗಂಭೀರ ಸುರಕ್ಷತಾ ಸಮಸ್ಯೆಗಳನ್ನು ಪತ್ತೆಹಚ್ಚಿಲ್ಲ.

 *ಎಚ್.ಪಿ.ವಿ ಲಸಿಕೆ ಹೇಗೆ ಕೆಲಸ ಮಾಡುತ್ತದೆ?* ಇತರ ಯಾವುದೇ ಲಸಿಕೆಯಂತೆ, HPV ಲಸಿಕೆ (ವೈರಸ್ ತರಹದ ಕಣಗಳು -VLP ಗಳು), ಒಮ್ಮೆ ಪರಿಚಯಿಸಲ್ಪಟ್ಟ ನಂತರ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಪ್ರಚೋದಿಸುತ್ತದೆ, ನಿರ್ದಿಷ್ಟ ಕ್ಯಾನ್ಸರ್-ಉಂಟುಮಾಡುವ HPV ಪ್ರಕಾರಗಳಿಂದ ಭವಿಷ್ಯದ ಸೋಂಕಿನಿಂದ ರಕ್ಷಿಸುವ ಪ್ರತಿಕಾಯಗಳನ್ನು ಸೃಷ್ಟಿಸುತ್ತದೆ. 

*ಎಚ್.ಪಿ.ವಿ ಲಸಿಕೆಗಳು ಎಷ್ಟು ಪರಿಣಾಮಕಾರಿ?* ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ 93-100% ರಷ್ಟು, HPV ಲಸಿಕೆಗಳು ಹೆಚ್ಚು ರೋಗನಿರೋಧಕ ಶಕ್ತಿಯನ್ನು ಹೊಂದಿವೆ. ಲಸಿಕೆಗೆ ಸೀರಮ್ ಶಾಸ್ತ್ರದ ಪ್ರತಿಕ್ರಿಯೆಯು ನೈಸರ್ಗಿಕ ಸೋಂಕಿನ ನಂತರದ ಪ್ರತಿಕ್ರಿಯೆಗಿಂತ ಹೆಚ್ಚು ಬಲವಾಗಿರುತ್ತದೆ. 

*ಎಚ್.ಪಿ.ವಿ ಲಸಿಕೆ ಎಲ್ಲಿ ಹಾಕಿಸಬೇಕು?* ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಕಲಾಗುತ್ತದೆ. ಪೋಷಕರು ತಪ್ಪದೇ ತಮ್ಮ 14 ರಿಂದ 15 ವರ್ಷ ವಯೋಮಿತಿಯೊಳಗಿರುವ ಮಕ್ಕಳಿಗೆ ಲಸಿಕೆ ಹಾಕಿಸಿ. 

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ, ಸೀಮಾ ಮಾಬಳೆ, ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ. ನಾಗೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಅಕ್ರಮ, ರೆಸಾರ್ಟ್ ಪರೀಕ್ಷೆ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಸಾರ್ವಜನಿಕರ ಅಹವಾಲುಗಳ ನಿರಂತರ ಪರಿಶೀಲನೆ, ಅಧಿಕಾರಿಗಳ ಹೊಣೆಗಾರಿಕೆಯಾಗಿದೆ- ಡಾ.ಶಾಲಿನಿ ರಜನೀಶ್ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ: ಮರು ಪರಿಶೀಲನೆ ಅವಧಿ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ!ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!ಪ್ರಧಾನಿ ವಿರುದ್ಧ ಕಿಡಿಕಾರಿದ್ದ ರುಚಿಕಾ ಸಿಂಗ್‌ಗೆ ಕಾಂಗ್ರೆಸ್ ಬೆಂಬಲ: ಭವ್ಯಾ ನರಸಿಂಹಮೂರ್ತಿಯಿಂದ "ಧೀರ ಬಾಲಕಿ" ಶ್ಲಾಘನೆ!ವಿವಾಹೇತರ ಸಂಬಂಧಕ್ಕೆ ಅಡ್ಡ ಬಂದ ಪತಿಯ ಭೀಕರ ಹತ್ಯೆ; 2 ಲಕ್ಷ ಸುಪಾರಿ ಕೊಟ್ಟಿದ್ದ ಪತ್ನಿ, ಪ್ರಿಯಕರ ಜೈಲಿಗೆ!13 ಕನ್ನಡಿಗರ ನಾಪತ್ತೆ: ಪತ್ತೆಗೆ ಕ್ರಮ, ಕೆಪಿಎಸ್‌ಸಿ ಹಗರಣದ ತನಿಖೆಯಲ್ಲಿ ಮಧ್ಯಪ್ರವೇಶಿಸಲ್ಲ – ಸಿಎಂ ಡಿಕೆಶಿ775 'ಅರಣ್ಯ ವೀಕ್ಷಕ' ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ: ಲಿಖಿತ ಪರೀಕ್ಷೆಯಿಲ್ಲದೆ ಭರ್ತಿ!ರೈಲ್ವೆ ಹಳಿ ದಾಟುವಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ದುರಂತ ಸಾವು!ಪತಿಗೆ ಕ್ರೌರ್ಯ, ಪ್ರತ್ಯೇಕ ವಾಸ: ಕೆಳ ಕೋರ್ಟ್ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್!