Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುನಿರತ್ನ ರಂಥ ಶಾಸಕರ ಆಯ್ಕೆ ಮಾಡಿ ನರಕ ಅನುಭವಿಸುತ್ತಿರುವ ಮತದಾರ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಸಕ ಮುನಿರತ್ನ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತ ಪಡಿಸಿ ಇಂಥ ಶಾಸಕರನ್ನು ಆಯ್ಕೆ ಮಾಡಿರುವ ಜನರ ಪರಿಸ್ಥಿತಿ ಏನೆಂದು ಅರ್ಥವಾಗುತ್ತದೆ. ಇವರ ವರ್ತನೆ ನೋಡಿದರೆ ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಅನಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತೀವ್ರ ಅಕ್ರೋಶ ವ್ಯಕ್ತಪಡಿಸಿದರು.


ನಗರದ ಮತ್ತಿಕೆರೆ ಜೆಪಿ ಪಾರ್ಕ್​ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಇಂಥವರನ್ನ ಆಯ್ಕೆ ಮಾಡಿಕೊಂಡಿದಕ್ಕೆ ನಿಮ್ಮ ಮನಸ್ಸಿಗೆ ನೋವಾಗುತ್ತಿದೆಯೆಂದು ನನಗೆ ಚೆನ್ನಾಗಿ ಗೊತ್ತಿದೆ, ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಉತ್ತರ ನೀಡಿ. ಇವರನ್ನು ಇಟ್ಟುಕೊಳ್ಳುವುದೋ, ಬೇಡವೋ ಎಂದು ಜನ ನಿರ್ಧರಿಸಿಬೇಕು. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗುವುದಿಲ್ಲ ಎಂದು ಹೇಳಿದ್ದಾರೆ.


ಮುನಿರತ್ನ ಅವರಿಗೆ ತಾಳ್ಮೆಯಿಲ್ಲ. ಅವರು ಕಾರ್ಯಕ್ರಮ ಹಾಳು ಮಾಡಬೇಕು ಎಂದೇ ಬಂದರೋ ಏನೋ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ, ಸಾರ್ವಜನಿಕರು ಯಾರು ತಲೆಕೆಡಿಸಿಕೊಳ್ಳಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.


ರಾಜಕಾರಣದಲ್ಲಿ ಸೋಲು, ಗೆಲುವು ಇದ್ದೇ ಇರುತ್ತೆ ಯಾವುದೂ ಶಾಶ್ವತವಲ್ಲ. ಆದರೆ ಜನಪ್ರತಿನಿಧಿಗಳಿಗೆ ಏನು ಗೌರವ ನೀಡಬೇಕು ಎನ್ನುವ ಅರಿವು ನನಗಿದೆ. ಇದು ಯಾವುದೇ ಅಭಿವೃದ್ಧಿ ಕಾರ್ಯಕ್ರಮವಲ್ಲ. ಯಾವುದೇ ಶಿಲಾನ್ಯಾಸ ಮಾಡುತ್ತಿಲ್ಲ, ಕಾಮಗಾರಿ ಉದ್ಘಾಟಿಸುತ್ತಿಲ್ಲ. ಜನರ ಜೊತೆ ನಡಿಗೆ ಕಾರ್ಯಕ್ರಮವಷ್ಟೇ. ಆರ್​ಎಸ್ಎಸ್ ಶತಮಾನೋತ್ಸವ ವೇಳೆಯಲ್ಲಿ ವರ್ತನೆ ಸರಿಯಲ್ಲ. ಗಣವೇಷಧಾರಿಯಾಗಿ ಬಂದು ಆರ್​ಎಸ್​ಎಸ್​ಗೆ ಬಿಜೆಪಿ ಶಾಸಕ ಮುನಿರತ್ನ ಅವಮಾನ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಮುನಿರತ್ನ ಸಿಟ್ಟು!-
ಶಾಸಕ ಮುನಿರತ್ನ ಆಕ್ರೋಶಗೊಂಡು ವೇದಿಕೆಯಲ್ಲಿ ಮೈಕ್ ಪಡೆಯುತ್ತಿದ್ದಂತೆಯೇ ಒಬ್ಬ ಸಂಸದರ ಫೋಟೋ ಇಲ್ಲ
, ಶಾಸಕರ ಫೋಟೋನೂ ಇಲ್ಲ, ಇದೇನು ಸಾರ್ವಜನಿಕರ ಕಾರ್ಯಕ್ರಮನಾ? ಕಾಂಗ್ರೆಸ್ ಕಾರ್ಯಕ್ರಮನಾ? ಅಂತಾ ಅಬ್ಬರಿಸಿ ಡಿಕೆಶಿ ವಿರುದ್ಧ ಹರಿಹಾಯ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ