Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ-ಡಿಸಿಎಂ

Advertisement
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ-ಡಿಸಿಎಂ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಹೊರ ವಲಯದ ಎಲೆಕ್ಟ್ರಾನಿಕ್ ಸಿಟಿ
, ವೈಟ್‌ಫೀಲ್ಡ್‌ ಸೇರಿದಂತೆ ಮತ್ತಷ್ಟು ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ತರಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹಲವು ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲೆಕ್ಟ್ರಾನಿಕ್‌ ಸಿಟಿ, ವೈಟ್‌ಫೀಲ್ಡ್‌, ಏರ್‌ಪೋರ್ಟ್‌ ರಸ್ತೆ, ಯಲಹಂಕದ ಕೆಲ ಪ್ರದೇಶಗಳು ಇನ್ನೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಉಳಿದುಕೊಂಡಿವೆ. ಸಂಪೂರ್ಣವಾಗಿ ನಗರೀಕರಣಗೊಂಡಿರುವ ಪ್ರದೇಶಗಳಲ್ಲಿಅಚ್ಚುಕಟ್ಟಾದ ಯೋಜನೆ ರೂಪಿಸಬೇಕಿದೆ.

ಮುಂದಿನ ದಿನಗಳಲ್ಲಿ ಆನೇಕಲ್ ಅನ್ನು ಜಿಬಿಎ ವ್ಯಾಪ್ತಿಗೆ ತರಲಾಗುವುದು. ಈಗಾಗಲೇ ಕಾವೇರಿ ನೀರನ್ನು ಒದಗಿಸಲಾಗುತ್ತಿದ್ದು, ಅಲ್ಲಿ ವಾಸಿಸುವ ಜನರಿಗೆ ಒದಗಿಸಬೇಕಾದ ಇತರ ಸೌಲಭ್ಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಕೆಲ ಪ್ರದೇಶಗಳ ಭಾಗಗಳನ್ನು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಲಾಗುತ್ತದೆ. ಬಿ.ಎಸ್‌.ಪಾಟೀಲ್‌ ನೇತೃತ್ವದ ಸಮಿತಿಯು ಜಿಬಿಎ ವ್ಯಾಪ್ತಿಗೆ ಸೇರಿಸಬಹುದಾದ ಪ್ರದೇಶಗಳ ಬಗ್ಗೆ ವರದಿ ಸಿದ್ಧಪಡಿಸುತ್ತಿದೆ ಎಂದು ಹೇಳಿದರು.

ಈಗಿರುವ ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ 25 ಲಕ್ಷ ಜನಸಂಖ್ಯೆ ಇದೆ. ಅವರನ್ನು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕಾಗುತ್ತದೆ. ಆನೇಕಲ್ ಪ್ರದೇಶದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಒಂದು ಯೋಜನೆ ಆದಷ್ಟು ಬೇಗ ರೂಪಿಸಬೇಕಿದೆ ಎಂದು ತಿಳಿಸಿದರು.


ರಸ್ತೆ ಗುಂಡಿ ಸಮಸ್ಯೆ ಬಗ್ಗೆ ಮಾತನಾಡಿ, ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಕೆಲವು ಸ್ಥಳಗಳಲ್ಲಿ ಡಾಂಬರು ಹಾಕಲಾಗುತ್ತಿದೆ. ಮಳೆಯಿಂದಾಗಿ ಕೆಲಸ ಬಯಸಿದಂತೆ ನಡೆಯುತ್ತಿಲ್ಲ ಎಂದರು.

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ರಸ್ತೆ ಗುಂಡಿಗಳು ಮತ್ತು ಕಸವನ್ನು ನೀವು ನೋಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ ನಾನು ಆ ಪ್ರದೇಶಕ್ಕೆ ಭೇಟಿ ನೀಡಿದ್ದೆ. ಬಯೋಕಾನ್ ಪಂಚಾಯತ್ ವ್ಯಾಪ್ತಿಯಲ್ಲಿದೆಯೇ ಹೊರತು GBA ಅಡಿಯಲ್ಲಿ ಅಲ್ಲ ಎಂದು ಹೇಳಿದರು.

ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಮತ್ತು ಇತರ ಶಾಸಕರ ಹೇಳಿಕೆಗಳ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಸೂಕ್ತ ಸಮಯದಲ್ಲಿ ಅವರಿಗೆ ಪ್ರತಿಕ್ರಿಯಿಸುತ್ತೇನೆ ಎಂದರು.

ಆಳಂದ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ 6,000 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಇದರ ಬಗ್ಗೆ ಯಾವುದೇ ಸಂದೇಹವಿಲ್ಲ. ಅಧಿಕಾರಿಗಳು ಬಹಳ ಹಿಂದೆಯೇ ದೂರು ನೀಡಿದ್ದಾರೆ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ