Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಆದರೆ ಸಂವಿಧಾನದ ಆಶಯದಂತೆ ಕೆಲಸ ಮಾಡುವೆ-ಜಮೀರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಿಮ್ಮೆಲ್ಲರ ಆಶೀರ್ವಾದದಿಂದ ನಾನು ರಾಜ್ಯದ ಉಪ ಮುಖ್ಯಮಂತ್ರಿಯಾದರೆ ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತೇನೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್‌ಖಾನ್ ಹೇಳಿದರು.


ಶುಕ್ರವಾರ ನಗರಕ್ಕೆ ಆಗಮಿಸಿದ್ದ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ ನಾನು ಮಂತ್ರಿಯಾಗಿದ್ದೇನೆಂದರೆ ಅದಕ್ಕೆ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕಾರಣ. ರಾಜ್ಯದಲ್ಲಿ ನನಗೆ ಉಪ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕರೆ ದಲಿತರು, ಶೋಷಿತರು, ಅಲ್ಪಸಂಖ್ಯಾತರು, ದಮನಿತರ ಪರವಾಗಿ ಕೆಲಸ ಮಾಡುತ್ತೇನೆ. ಸಂವಿಧಾನದ ಆಶಯದಂತೆ ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕೆಂಬುದು ನನ್ನ ಬಯಕೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಎಂಎಸ್) ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ ಸಚಿವ ಬಿ.ಝಡ್. ಜಮೀರ್ ಅಹಮದ್‌ಖಾನ್‌ರವರು ಸರ್ವಧರ್ಮದ ನಾಯಕ. ಬಡವರು, ದಲಿತರು, ಶೋಷಿತರು, ಧ್ವನಿಯಿಲ್ಲದವರ ಬಗ್ಗೆ ಅಪಾರ ಕಾಳಜಿಯಿಟ್ಟುಕೊಂಡಿದ್ದಾರೆ. ೨೦೨೩ ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ೧೩೫ ಸೀಟುಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆಯೆಂದರೆ ಅದಕ್ಕೆ ಮುಸ್ಲಿಂರು, ದಲಿತರು ಕಾರಣ ಎನ್ನುವುದನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರೆಯಬಾರದು.

ನಿಜವಾಗಿಯೂ ಕಾಂಗ್ರೆಸ್ ನಾಯಕರುಗಳಿಗೆ ಬದ್ದತೆ, ಮುಸ್ಲಿಂರ ಬಗ್ಗೆ ಗೌರವವಿದ್ದರೆ ಸಚಿವ ಜಮೀರ್ ಅಹಮದ್‌ಖಾನ್‌ರವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಇಲ್ಲವಾದಲ್ಲಿ ಬಸವಕಲ್ಯಾಣದಿಂದ ಬೆಂಗಳೂರುವರೆಗೆ ದಲಿತರು ಪಾದಯಾತ್ರೆ ಕೈಗೊಳ್ಳಬೇಕಾಗುತ್ತದೆಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ ಮುಸ್ಲಿಂರು, ದಲಿತರ ಮತಗಳನ್ನು ಪಡೆದು ಅಧಿಕಾರ ಅನುಭವಿಸಿಕೊಂಡು ಬರುತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರ ನೀಡುವಲ್ಲಿ ಏಕೆ ಈ ಎರಡು ಜಾತಿಯವರನ್ನು ನಿರ್ಲಕ್ಷಿಸುತ್ತಿದೆಯೆಂದು ಪ್ರಶ್ನಿಸಿದ ಬಾಳೆಕಾಯಿ ಶ್ರೀನಿವಾಸ್ ಅಂಬೇಡ್ಕರ್‌ರವರ ಆಶಯದಂತೆ ಬಿ.ಝಡ್. ಜಮೀರ್ ಅಹಮದ್‌ಖಾನ್ ರಾಜ್ಯದ ಉಪ ಮುಖ್ಯಮಂತ್ರಿಯಾಗಬೇಕೆಂದು ನಮ್ಮ ಆಸೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ವಕ್ಫ್‌ಬೋರ್ಡ್ ಮಾಜಿ ಚೇರ್ಮನ್ ಎಂ.ಸಿ.ಒ.ಬಾಬು, ವಕ್ಫ್ ಮಂಡಳಿ ರಾಜ್ಯ ಸಮಿತಿ ಸದಸ್ಯ ಕೆ.ಅನ್ವರ್‌ಪಾಷ ಸೇರಿದಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಹಲಿಂಗಪ್ಪ ಕುಂಚಿಗನಹಾಳ್, ಕೆ.ರಾಜಣ್ಣ, ಕಣುಮೇಶ್ ಜಾಲಿಕಟ್ಟೆ, ವೆಂಕಟೇಶ್ ಕವಾಡಿಗರಹಟ್ಟಿ ಹಾಗೂ ಅನೇಕ ದಲಿತ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಚಳ್ಳಕೆರೆ ಗೇಟ್‌ನಿಂದ ತೆರೆದ ವಾಹನದಲ್ಲಿ ಸಚಿವ ಬಿ.ಝಡ್ ಜಮೀರ್ ಅಹಮದ್‌ ಖಾನ್‌ರನ್ನು ಮರೆವಣಿಗೆ ಮೂಲಕ ಕರೆತರಲಾಯಿತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ