ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮನೆಗಳ ಹಂಚಿಕೆಗೆ ಲಂಚ ನೀಡಬೇಕೆಂದು ಹೇಳಿಕೆ ನೀಡಿದ್ದ ಆಳಂದ ಶಾಸಕ ಬಿ ಆರ್ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದರು.
ನಂತರ ಡಿಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ, ಪಕ್ಷದ ಅಧ್ಯಕ್ಷನಾಗಿ ವಾಸ್ತವಾಂಶ ತಿಳಿದುಕೊಳ್ಳುವ ಅವಶ್ಯಕತೆಯಿತ್ತು. ಪಾಟೀಲ್ ಎಲ್ಲ ಮಾಹಿತಿ ನೀಡಿದ್ದಾರೆ. ಅವರು ನೀಡಿರುವ ವಿವರಗಳನ್ನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೂ ಮಾತಾಡುತ್ತೇನೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.
ಇನ್ನೆರಡು ದಿನಗಳಲ್ಲಿ ಪಕ್ಷದ ವರಿಷ್ಠರು ಬೆಂಗಳೂರಿಗೆ ಬರಲಿದ್ದಾರೆ ಮತ್ತು ಎಲ್ಲ ಶಾಸಕ ಹಾಗೂ ಮಂತ್ರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.


