Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಲು ಆದೇಶ, ಡಿಸಿಎಂ ಡಿಕೆಶಿ ಕಿಡಿ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಕರ್ನಾಟಕ ಸರ್ಕಾರ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ್ದ ವಿವಾದ ಮಾಸುವ ಮುನ್ನವೇ ಕೇಂದ್ರ ಸರ್ಕಾರ ಕೂಡಾ ಅಂಥದ್ದೆ ಒಂದು ವಿವಾದಾತ್ಮತ ಆದೇಶ ಮಾಡಿರುವುದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಸ್ತ್ರ ಸಿಕ್ಕಂತಾಗಿದೆ.
ಕೇಂದ್ರ ಸರ್ಕಾರ ನಡೆಸುವ ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ
, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಈ ಆದೇಶ ಹಿಂಪಡೆಯಬೇಕು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗ್ರಹಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಬಿಜೆಪಿಯವರು ಹೇಳುವುದು ಒಂದು, ಮಾಡುವುದು ಇನ್ನೊಂದು. ಇದೇ ಅವರ ನಿಜವಾದ ಮುಖವಾಡ. ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗುತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಸಣ್ಣ
, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸಗಿದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು ಎಂದು ತಿಳಿಸಿದರು.

ಕೇಂದ್ರ ಕಾರಣ: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದರು.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟ ಮಾಡಲಿದ್ದೇವೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.


ಕೇಂದ್ರದಲ್ಲಿ ಬಿಜೆಪಿಯವರದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಬೇಕು. ಏಕೆಂದರೆ, ಅವರಿಂದಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು. ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ