Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಸೀರ್ ಅಹ್ಮದ್ ವಿರುದ್ಧ ಕ್ರಮ: ಪಕ್ಷದ ಶಿಸ್ತು ಮುಖ್ಯ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆಗೊಳಿಸಿರುವ ನಿರ್ಧಾರವು ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಂಡ ಶಿಸ್ತು ಕ್ರಮವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
​ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿದರು.

​ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲ-
​ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉದ್ಭವಿಸಿದ್ದ ಬಂಡಾಯ ಶಮನಗೊಳಿಸುವ ಜವಾಬ್ದಾರಿಯನ್ನು ನಸೀರ್ ಅಹ್ಮದ್ ಅವರಿಗೆ ಪಕ್ಷ ವಹಿಸಿತ್ತು. ಬಂಡಾಯ ಅಭ್ಯರ್ಥಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವೊಲಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. "ಅಲ್ಲಿನ ವಾಸ್ತವ ಸ್ಥಿತಿಯ ಬಗ್ಗೆ ನನಗೆ ಇನ್ನು ವರದಿ ಬರಬೇಕಿದೆ. ಆದರೆ ಮುಖ್ಯಮಂತ್ರಿಗಳು ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಈ ತೀರ್ಮಾನ ಕೈಗೊಂಡಿದ್ದಾರೆ" ಎಂದು ಡಿಸಿಎಂ ಹೇಳಿದರು.


​ಪಕ್ಷದಲ್ಲಿ ಶಿಸ್ತಿಗೆ ಆದ್ಯತೆ-
​ಯಾವುದೇ ಪಕ್ಷದ ಯಶಸ್ಸಿಗೆ ಶಿಸ್ತು ಅತಿ ಮುಖ್ಯ. ಅಭ್ಯರ್ಥಿಗಳ ಆಯ್ಕೆಯನ್ನು ಎಲ್ಲರನ್ನೂ ವಿಶ್ವಾಸಕ್ಕೆ ಪಡೆದೇ ಮಾಡಲಾಗಿತ್ತು. ನಂತರದ ಬೆಳವಣಿಗೆಗಳ ಬಗ್ಗೆ ನಿರಂತರವಾಗಿ ವರದಿಗಳನ್ನು ಪಡೆಯಲಾಗುತ್ತಿತ್ತು. ನಾಯಕರ ವರದಿಗಳ ಆಧಾರದ ಮೇಲೆಯೇ ಮುಖ್ಯಮಂತ್ರಿಗಳು ಈ ಕ್ರಮ ಜರುಗಿಸಿದ್ದಾರೆ ಎಂದು ಅವರು ಪುನರುಚ್ಚರಿಸಿದರು.


​ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಶಾಸಕರ ಭೇಟಿ-
​ಶಾಸಕರನ್ನು ವೈಯಕ್ತಿಕವಾಗಿ ಭೇಟಿ ಮಾಡುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು
, "ಪಕ್ಷದ ಅಧ್ಯಕ್ಷನಾಗಿ ಶಾಸಕರೊಂದಿಗೆ ಚರ್ಚಿಸಿ ಭವಿಷ್ಯದ ರಾಜಕಾರಣ ರೂಪಿಸುವುದು ನನ್ನ ಕರ್ತವ್ಯ. ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ನಾವು ಸಿದ್ಧತೆ ನಡೆಸಬೇಕಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಗಳ ವರದಿಯನ್ನು ಶಾಸಕರು ನೀಡುತ್ತಿದ್ದಾರೆ" ಎಂದರು.

​ಶಾಸಕರಿಗೆ ಎಚ್ಚರಿಕೆ ಮತ್ತು ಸಲಹೆ-
​ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ಹೋಗುವುದರಲ್ಲಿ ತಪ್ಪಿಲ್ಲ
, ಬೇಡಿಕೆ ಇಡುವುದು ಅವರ ಹಕ್ಕು. ಆದರೆ ಶಿಸ್ತಿನ ಮೀರಬಾರದು ಎಂದು ಅವರು ಸೂಚಿಸಿದರು. ಇದೇ ವೇಳೆ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಮತ್ತು ಪಕ್ಷದ ಘನತೆಗೆ ಧಕ್ಕೆ ಬರದಂತೆ ನಡೆದುಕೊಳ್ಳುವಂತೆ ಸಹೋದ್ಯೋಗಿ ಶಾಸಕರಿಗೆ ಸಲಹೆ ನೀಡಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ