ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬ್ಯಾಡ್ಮಿಂಟನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾಗಿದೆ. ಈ ಸಂದರ್ಭದಲ್ಲಿ ಜೊತೆಯಲ್ಲಿದ್ದ ಎಂಎಲ್ಸಿ ಗೋವಿಂದರಾಜು ಅವರು ತಕ್ಷಣವೇ ಸಮಯಪ್ರಜ್ಞೆ ಮೆರೆದು, ಅವರನ್ನು ವೈದೇಹಿ ಆಸ್ಪತ್ರೆಗೆ ಸೇರಿಸಿದ್ದಾರೆ.
ಪರಮೇಶ್ವರ್ ಅವರಿಗೆ ಹೃದಯಾಘಾತವಾಗಿದೆ ಎಂಬ ಪ್ರಾಥಮಿಕ ಮಾಹಿತಿಗಳು ಹೊರಬಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ನೇರವಾಗಿ ಭೇಟಿ ನೀಡಿ ಸಚಿವರ ಆರೋಗ್ಯ ಪರಿಸ್ಥಿತಿಯ ಕುರಿತು ವಿಚಾರಿಸಿದ್ದಾರೆ.
ಪ್ರಸ್ತುತ ನುರಿತ ವೈದ್ಯರ ವಿಶೇಷ ತಂಡವು ಜಿ. ಪರಮೇಶ್ವರ್ ಅವರ ಆರೋಗ್ಯ ಸ್ಥಿತಿಯನ್ನು ತೀವ್ರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಚಿಕಿತ್ಸೆಯನ್ನು ಮುಂದುವರಿಸಿದೆ.



