Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೇಸ್‌ಲೆಸ್, ಸಂಪರ್ಕ ರಹಿತ ಹಾಗೂ ಆನ್‌ಲೈನ್ ಮೂಲಕ ಇ-ಖಾತಾ ವ್ಯವಸ್ಥೆ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಫೇಸ್‌ಲೆಸ್, ಸಂಪರ್ಕ ರಹಿತ ಹಾಗೂ ಆನ್‌ಲೈನ್ ಮೂಲಕ ಬಿಬಿಎಂಪಿ ಇ-ಖಾತಾ ವಿತರಣಾ ವ್ಯವಸ್ಥೆಯನ್ನು ಪರೀಕ್ಷಾರ್ಥವಾಗಿ ಇಂದಿನಿಂದ ಆರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಮಾಲಿಕರಿಗೆ ಪೇಪರ್ ಲೆಸ್ ಹಾಗೂ ಆನ್ಲೈನ್ ಮೂಲಕ ಇ - ಖಾತಾ ವಿತರಣಾ ವ್ಯವಸ್ಥೆಯನ್ನು ಬಿಬಿಎಂಪಿ ಪರೀಕ್ಷಾರ್ಥವಾಗಿ ಪ್ರಾರಂಭಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ದಿ ಸಚಿವ ಡಿ.ಕೆ.ಶಿವಕುಮಾರ್ ನಿರ್ದೇಶನದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಅಕ್ಟೋಬರ್​ 1 ರಿಂದ ಸಂಪರ್ಕ ರಹಿತವಾಗಿ ಆನ್ಲೈನ್ ಮೂಲಕ ಇ-ಖಾತಾ ವಿತರಣಾ ವ್ಯವಸ್ಥೆ ಆರಂಭಿಸಿದೆ.

ಈ ಕುರಿತು ಹಲವು ಮಾನದಂಡಗಳನ್ನು ಸಿದ್ದಪಡಿಸಿಕೊಳ್ಳಲಾಗಿದೆ. ಪಾಲಿಕೆಯಲ್ಲಿ ಲಭ್ಯವಿರುವ ದಾಖಲೆಯ ಆಧಾರದಲ್ಲಿ ಕರಡು ಇ ಖಾತೆಗಳನ್ನು ಆನ್ಲೈನ್​ನಲ್ಲಿ ಇರಿಸಲಾಗಿರುತ್ತದೆ. ಇದರಿಂದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ, ತಮ್ಮ ಸ್ವತ್ತಿನ ಕರಡು ಇ -ಖಾತಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ ದಾಖಲೆಗಳು ಹೊಂದಿಕೆಯಾಗದಿದ್ದರೆ ನಿಯಮಾವಳಿಗಳಂತೆ ಅಂತಿಮ ಇ - ಖಾತಾ ಪಡೆಯಲು ವೈಯಕ್ತಿಕವಾಗಿ ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿ ಭೇಟಿ ಮಾಡಬೇಕು. ಇ - ಖಾತಾ ವಿತರಿಸದಂತೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಕರಡು ಇ - ಖಾತಾ ರಚಿಸಿದ 7 ದಿನಗಳವರೆಗೆ ಆಕ್ಷೇಪಣೆಗೆ ಅವಧಿ ನಿಗದಿಪಡಿಸಲಾಗಿದೆ. ನಂತರ ಸಹಾಯಕ ಕಂದಾಯ ಅಧಿಕಾರಿಗಳು ಆಕ್ಷೇಪಣೆಯ ವಿಚಾರಣೆ ಕೈಗೊಂಡು ಆದ್ಯತಾನುಸಾರ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಬಿಬಿಎಂಪಿ ಸೇರ್ಪಡೆಗೆ ಮೊದಲು ಗ್ರಾಮ ಪಂಚಾಯಿತಿಯ ಇ -ಸ್ವತ್ತು ತಂತ್ರಾಂಶದಲ್ಲಿ ಇ-ಖಾತಾ ಹೊಂದಿದ್ದ ಮಲ್ಲಸಂದ್ರ ಮತ್ತು ಮನವರ್ತೆ ಕಾವಲ್ ಗ್ರಾಮಗಳಲ್ಲಿನ ಸುಮಾರು 2,500 ಸ್ವತ್ತುಗಳಿಗೆ ಪಾಲಿಕೆಯು ಸ್ವಯಂಚಾಲಿತವಾಗಿ ಸ್ವಯಂಘೋಷಿತ ಆಸ್ತಿ ತೆರಿಗೆ (ಎಸ್‌ಎಎಸ್) ಅರ್ಜಿ ಸಂಖ್ಯೆ ಹಾಗೂ ಇ - ಖಾತಾಗಳನ್ನು ಸೃಷ್ಟಿಸಲಾಗಿತ್ತು. ಈಗ ಅದೇ ಮಾದರಿಯಲ್ಲಿ ಬಿಬಿಎಂಪಿಯ 8 ವಲಯಗಳಲ್ಲಿ ಹೊಸ ವ್ಯವಸ್ಥೆ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಒಂದೆರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2,500 ಆಸ್ತಿಗಳನ್ನು ಇ-ಖಾತಾ ಮಾಡಿದ್ದ ಬಿಬಿಎಂಪಿಯು ಲಕ್ಷಾಂತರ ಆಸ್ತಿ ಖಾತೆಗಳನ್ನು ಈಗಾಗಲೇ ಡಿಜಿಟಲೀಕರಣ ಮಾಡಲಾಗಿದೆ. ಇದೀಗ ಸಂಪರ್ಕರಹಿತ ಆನ್‌ಲೈನ್ ಡಿಜಿಟಲ್ ವ್ಯವಸ್ಥೆ ಜಾರಿಗೆ ಮುಂದಾಗಿದ್ದೇವೆ.

ಬೃಹತ್ ಸ್ವರೂಪದಲ್ಲಿ ಇ-ಖಾತಾ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಆಗಿರುವುದರಿಂದ ಪರೀಕ್ಷಾರ್ಥವಾಗಿ ಪ್ರಾರಂಭಿಸುವ ಮೂಲಕ ಧಾರಣೆಗಳನ್ನು ಅಳವಡಿಸಿಕೊಳ್ಳಲಾಗುವುದು. ಆದ್ದರಿಂದ ಬಿಬಿಎಂಪಿ ಅತ್ಯಮೂಲ್ಯ ಸೇವೆ ನೀಡಲು ನಾಗರಿಕರು ಕೂಡ ಸಹಕರಿಸಬೇಕು ಎಂದಿದ್ದಾರೆ.

ಸಾರ್ವಜನಿಕರು ತಮ್ಮ ಸ್ವತ್ತಿನ ಇ-ಖಾತಾ ಕರಡು ಪ್ರತಿಯನ್ನು ಡೌನ್‌ಲೋಡ್‌ಮಾಡಲು ಈ ಕೆಳಗಿನ ವೆಬ್‌ವಿಳಾಸಕ್ಕೆ ಭೇಟಿ ನೀಡಬಹುದಾಗಿದೆ. bbmpeaasthi.karnataka.gov.in
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ