Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ವಾಸಿಗಳಿಗೆ ಗಿಫ್ಟ್ ಕೊಡುವುದಕ್ಕೆ ತಯಾರಿಲ್ಲ-ಡಿಸಿಎಂ  

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಗರದ ಕೋಗಿಲು ಲೇಔಟ್​ನಲ್ಲಿ ಅಕ್ರಮವಾಸಿಗಳಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರನ್ನೂ ನಾವು ಓಲೈಕೆ ಮಾಡುತ್ತಿಲ್ಲ. ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.

ಕೆಲವರು ಹಣ ಸಂಗ್ರಹಿಸಿದ್ದಾರೆ ಎಂದು ಅಲ್ಲಿನವರೇ ಹೇಳಿಕೆ ನೀಡಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಯಾರಿಗೆ ಅರ್ಹತೆ ಇದೆಯೋ ಅವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಮನೆ ನೀಡಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಹಕ್ಕುಪತ್ರಗಳನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ.


ಅದನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಹೊರಗಿನಿಂದ ಬಂದವರು ಸಹ ಹೊಸದಾಗಿ ಸೇರಿಕೊಂಡಿದ್ದಾರೆ. ನೈಜ ಮತದಾರರು ಎಷ್ಟಿದ್ದಾರೆ ಎಂಬ ಬಗ್ಗೆ ದಾಖಲೆ ಪರಿಶೀಲಿಸಿ, ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದರು.

ಕೇರಳದ ಕೆಲವು ಸಂಸದರು ಖಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ನಾವು ಉತ್ತಮವಾಗಿ ಸರ್ಕಾರ ನಡೆಸಿಕೊಂಡು ಹೋಗುತ್ತಿದ್ದೇವೆ. ಅವರು ಏನು ಬೇಕಾದರೂ ಹೇಳಿಕೆ ನೀಡಲಿ. ನಾವು ಅಕ್ರಮ ಒತ್ತುವರಿಗೆ ಅವಕಾಶ ನೀಡುವುದಿಲ್ಲ. ಅವರು ಈ ಹಿಂದೆ ಕೊಟ್ಟ ಭರವಸೆ, ಪ್ರವಾಹದ ಸಂದರ್ಭದಲ್ಲಿ ನೀಡಿದ ಮಾತನ್ನೇ ಈಡೇರಿಸಿಲ್ಲ. ಅಂತಹವರು ನಮಗೆ ಹೇಳುವ ಅವಶ್ಯಕತೆ ಇಲ್ಲ. ನಮ್ಮ ರಾಜ್ಯದ ವಿಚಾರ ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಡಿಸಿಎಂ ಟಾಂಗ್ ನೀಡಿದರು.

ಎರಡೆರಡು ರಾಜ್ಯದ ಆಧಾರ್ ಕಾರ್ಡ್ ಗಳು, ಮತದಾರರ ಚೀಟಿಗಳು ಸಂತ್ರಸ್ತರ ಬಳಿ ಇರುವ ಬಗ್ಗೆ ಕೇಳಿದಾಗ, "ಇದರ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ. ಅರ್ಹರಿಗೆ ಮಾತ್ರ ಮನೆ ನೀಡಲಾಗುವುದು. ಸ್ಥಳೀಯ ಮತದಾರರ ಪಟ್ಟಿಯಲ್ಲಿ ಹೆಸರು ಹಾಗೂ ನಿಜವಾದ ಸ್ಥಳೀಯ ವಿಳಾಸ ಇದ್ದರೆ ಮಾತ್ರ ಮನೆ ನೀಡಲಾಗುವುದು. ಯಾವುದೇ ಸಕ್ರಮ ಮಾಡುತ್ತಿಲ್ಲ. ಅರ್ಹರನ್ನು ಗುರುತಿಸಲಾಗುವುದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಸ್ಪಷ್ಟಪಡಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ