Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Traveling Tips

ನರೇಗಾ ಉಳಿಸಿ ಜನಾಂದೋಲನಕ್ಕೆ ಸಿದ್ಧತೆ-ಡಿಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಬಿ ಜಿ ರಾಮ್ ಜಿ ಕಾಯ್ದೆ: ರಾಜ್ಯ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುವ ಅನ್ಯಾಯದ ಬಗ್ಗೆ 2 ದಿನಗಳ‌ವಿಶೇಷ ಅಧಿವೇಶನ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.


ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಹಾಗೂ ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕು ರಕ್ಷಿಸಲು ಎಐಸಿಸಿ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ "ನರೇಗಾ ಉಳಿಸಿ" ಜನಾಂದೋಲನ ಆಯೋಜನೆ ಸಂಬಂಧ ಇಂದು ನಡೆದ ಮಂತ್ರಿಗಳು, ಸಂಸದರು, ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯ ಬಳಿಕ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.


ಕೇಂದ್ರ ಸರ್ಕಾರ ಮನರೇಗಾ ಯೋಜನೆ ರದ್ದು ಮಾಡಿ, ವಿಬಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿರುವ ಹಿನ್ನಲೆಯಲ್ಲಿ ಶಾಸಕರು, ಸಂಸದರ ಸಭೆ ನಡೆಸಲಾಗಿದೆ. ವಿಬಿ ಜಿ ರಾಮ್ ಜಿ ಕಾಯ್ದೆ ಹಿಂಪಡೆದು, ಮನರೇಗಾ ವಾಪಸ್ ತರಬೇಕು ಎಂದು ಒತ್ತಾಯಿಸಿ ಹೋರಾಟ ಮಾಡಲು ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ.

ಸದ್ಯದಲ್ಲೇ ಪರಾಜಿತ ಅಭ್ಯರ್ಥಿಗಳು, ಬ್ಲಾಕ್ ಹಾಗೂ ಬೂತ್ ಅಧ್ಯಕ್ಷರ ಸಭೆ ಕರೆಯಲಾಗುವುದು. ಕೇಂದ್ರ ಸರ್ಕಾರದ ಈ ಕಾನೂನು ದೇಶಕ್ಕೆ ಬಹು ದೊಡ್ಡ ಮಾರಕವಾಗಿದ್ದು, ಇದನ್ನು ತೆಗೆದುಹಾಕಿ, ಮನರೇಗಾ ಪುನಃ ಸ್ಥಾಪನೆಗೆ ಬೃಹತ್ ಹೋರಾಟ ನಡೆಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.


ಗ್ರಾಮ ಪಂಚಾಯತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು. ಜ. 26 ರಿಂದ ಫೆ. 2ರವರೆಗೆ ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ ಪಾದಯಾತ್ರೆ ನಡೆಸಲಾಗುವುದು. ಉದ್ಯೋಗ ಕಾರ್ಡ್ ಹೊಂದಿರುವ ಕಾರ್ಮಿಕರ ಜತೆ ಈ ಪಾದಯಾತ್ರೆ ಮಾಡಲಾಗುವುದು. ಈ ಪಾದಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ.

ಮೂರು ದಿನ ಜಿಲ್ಲಾ ಕೇಂದ್ರಗಳಲ್ಲಿ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಲಾಗುವುದು. ಪ್ರತಿ ಪಂಚಾಯತಿಗಳಲ್ಲಿ ಜಾಗೃತಿ ಮೂಡಿಸಲಾಗುವುದು. ಮನರೇಗಾ ಬದಲಾವಣೆ ಮೂಲಕ 6000 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ನಮ್ಮ ರಾಜ್ಯದಿಂದ ಕಸಿದುಕೊಳ್ಳಲಾಗಿದೆ ಎಂದು ಡಿಸಿಎಂ ದೂರಿದರು.

ಇಷ್ಟು ದಿನ ಪಂಚಾಯ್ತಿಗಳು ಯಾವ ಕಾಮಗಾರಿ ಮಾಡಬೇಕು ಎಂಬ ತೀರ್ಮಾನ ಮಾಡುತ್ತಿದ್ದವು. ಈಗ ದೆಹಲಿಯಿಂದ ನಿರ್ದೇಶನ ಮಾಡಿದ ಕಾಮಗಾರಿಗಳನ್ನು ಮಾತ್ರ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರ ಈ ಬದಲಾವಣೆ ಬಗ್ಗೆ ರಾಜ್ಯಗಳ ಜತೆ ಸಮಾಲೋಚನೆ ನಡೆಸಬೇಕಿತ್ತು. ಈ ಬದಲಾವಣೆಯಿಂದ ಗ್ರಾಮೀಣ ಭಾಗದ ಜನರ ಉದ್ಯೋಗ ಹಕ್ಕು ಕಸಿಯಲಾಗಿದೆ.  ಸಂವಿಧಾನದ 73, 74ನೇ ತಿದ್ದುಪಡಿ ಪ್ರಕಾರದ ಹಕ್ಕನ್ನು ಕಸಿಯಲಾಗಿದೆ ಎಂದು ಡಿಸಿಎಂ ದೂರಿದರು.


ಮನರೇಗಾ ಯೋಜನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ ಒಂದು ವಾರದಲ್ಲಿ ಕೂಲಿ ಕೊಡುವ ಶಕ್ತಿ ಇತ್ತು. ಇದನ್ನೆಲ್ಲಾ ಮುಗಿಸಿ ಹೊಸ ರೂಪದಲ್ಲಿ ಅನ್ಯಾಯ ಮಾಡಿದ್ದಾರೆ. ಮನರೇಗಾದಲ್ಲಿ 90% ಅನುದಾನ ಕೇಂದ್ರ ಸರ್ಕಾರ ನೀಡುತ್ತಿತ್ತು. ಈಗ 60% ಕೇಂದ್ರ ಸರ್ಕಾರ, 40% ರಾಜ್ಯ ಸರ್ಕಾರ ಕೊಡಬೇಕು ಎಂದು ಬದಲಾವಣೆ ತಂದಿದ್ದಾರೆ. ಇದು ಒಕ್ಕೂಟ ವ್ಯವಸ್ಥೆ ವಿಚಾರವಾಗಿದ್ದು, ಈ ವಿಚಾರಗಳನ್ನ ರಾಜ್ಯಗಳ ಜೊತೆ ಚರ್ಚೆ ಮಾಡಬೇಕಿತ್ತು. ಇದನ್ನೆಲ್ಲಾ ಬಿಟ್ಟು ರಾತ್ರೊ, ರಾತ್ರಿ ಏಕಾಏಕಿಯಾಗಿ ಬದಲಾವಣೆ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ನಾನೇ ಕ್ರೂರಿ, ನಾನೇ ಪ್ರೇಮಿ": ಆತ್ಮಾವಲೋಕನದ ಸಂದೇಶ ನೀಡಿದ ಡಾ.ಬಸವ ಕುಮಾರ ಸ್ವಾಮೀಜಿ ಭಾವನಾತ್ಮಕ ಮಾತುಗಳು!ಬುಡಬುಡಕಿ ಬಂದನಾರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅಭಯಸಾರಿಗೆ ಡಿಪೋ ಹಾಗೂ ವಸತಿ ಗೃಹಗಳ ಉದ್ಘಾಟನೆಗೆ ಒತ್ತಾಯಿಸಿ ಸಚಿವ ರಘುಮೂರ್ತಿಯವರಿಗೆ ಮನವಿ ವಾಸವಿ ಕಾಲೋನಿಯ ಗಣೇಶ ಸನ್ನಿಧಿಯಲ್ಲಿ ಶ್ರೀಶಾರದಾಶ್ರಮದ ಭಕ್ತರಿಂದ ವಿಶೇಷ ಭಜನೆಹರಿಯಬ್ಬೆ ನಾಗಭೂಷಣ ಡಿ. ಅವರಿಗೆ 'ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್' ಗೌರವಬಯಲುಸೀಮೆಯ ಜೀವನಾಡಿ: ಚಿತ್ರದುರ್ಗ ಜಿಲ್ಲೆಗೆ ಹರಿದುಬಂದ ಭದ್ರೆ - ಸಂಭ್ರಮವೋ ಸಂಭ್ರಮ!ಗಂಗಾ ಕಲ್ಯಾಣ: 13 ಫಲಾನುಭವಿಗಳಿಗೆ ಮೋಟಾರ್ ಪಂಪ್ ವಿತರಿಸಿದ ಸಚಿವ ಟಿ.ರಘುಮೂರ್ತಿದಾವಣಗೆರೆಯಲ್ಲಿ ಇಂದು ರಾಜ್ಯಮಟ್ಟದ 'ವಿದ್ಯಾರತ್ನ' ಪ್ರಶಸ್ತಿ ಪ್ರದಾನ: 18 ಜನ ಶಿಕ್ಷಕರ ಆಯ್ಕೆತಾಲೂಕಿನ ಹುಲಿಕುಂಟೆಯಲ್ಲಿ ಹೊಸ ಕೆಎಸ್‌ಆರ್‌ಟಿಸಿ ಉಪವಿಭಾಗ ಹಾಗೂ ಬಸ್ ಡಿಪೋ: ಸಚಿವ ಡಾ. ಜಿ. ಪರಮೇಶ್ವರ್