Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಜೆಂಟ್ ಗಳ ಅವ್ಯವಹಾರಗಳಿಗೆ ಕಡಿವಾಣ ಹಾಕಿ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.


ಬೆಂಗಳೂರಿನ ಅಂಬೇಡ್ಕರ್‌ವೀದಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಆಡಳಿತ ಸುಧಾರಣೆಗಳು ಹಾಗೂ ಸಾರ್ವಜನಿಕ ಅಹವಾಲು ನಿರ್ವಹಣೆ ವಿಷಯಗಳ ಕುರಿತು ಬಿಡಿಎ ನೌಕರರಿಗೆ ತರಬೇತಿ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಿಡಿಎ ತಮ್ಮ ಸಿಬ್ಬಂದಿಗೆ 7 ದಿನಗಳ ಈ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವುದು, ಪರಿಣಾಮಕಾರಿಯಾಗಿ ಕುಂದುಕೊರತೆಗಳ ನಿರ್ವಹಣೆ, ಸಾರ್ವಜನಿಕರಿಗೆ ಅನುಕೂಲವಾಗುವ ಪ್ರಕ್ರಿಯೆಗಳ ಸರಳೀಕರಣ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಹೆಚ್ಚು ನೊಂದವರೇ ಬರುತ್ತಾರೆ
, ಹೀಗಾಗಿ ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು.

ಎಲ್ಲರನ್ನೂ ಗೌರವದಿಂದ ಕಾಣಬೇಕು ಹಾಗೂ ಏಜೆಂಟ್ ಗಳ ಅವ್ಯವಹಾರಗಳಿಗೆ ಅವಕಾಶ ಕೊಡದೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಬಿಡಿಎ ಸಿಬ್ಬಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಲಹೆಗಳನ್ನು ನೀಡಿದರು. ಬಿಡಿಎ ಅಧ್ಯಕ್ಷ ಎನ್.ಎ ಹ್ಯಾರಿಸ್‌ಸೇರಿದಂತೆ ಬಿಡಿಎ ಅಧಿಕಾರಿಗಳು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ