Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಶಿವಕುಮಾರ್ ಹಾಗೂ ಮಾಜಿ ಸಂಸದ ಸುರೇಶ್ ಅವರಿಗೆ ಸಂಕಷ್ಟ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್​ ಅವರು ಯಂಗ್‌ಇಂಡಿಯಾಗೆ
2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ನಲ್ಲಿ ಇಬ್ಬರ ಹೆಸರು ಉಲ್ಲೇಖಿಸಿದೆ ಎಂದು ತಿಳಿದುಬಂದಿದ್ದು ಡಿಕೆ ಶಿವಕುಮಾರ್‌ಮತ್ತು ಡಿಕೆ ಸುರೇಶ್‌ ಬುಡಕ್ಕೆ ನೀರು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಾನು 25 ಲಕ್ಷ, ನನ್ನ ತಮ್ಮ ಡಿ.ಕೆ.ಸುರೇಶ್ 25 ಲಕ್ಷ ಕೊಟ್ಟಿದ್ದೇವೆ. ನಮ್ಮ ಪಕ್ಷ ನಡೆಸುತ್ತಿದ್ದ ಪತ್ರಿಕೆಗೆ ದೇಣಿಗೆ ಕೊಟ್ಟರೆ ತಪ್ಪೇನು? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿ, ನ್ಯಾಷನಲ್​ ಹೆರಾಲ್ಡ್​ ಪತ್ರಿಕೆಗೆ 50 ಲಕ್ಷ ರೂ. ಹಣ ಕೊಟ್ಟಿದ್ದೇವೆ. ಅದರಲ್ಲಿ ನಾನು 25 ಲಕ್ಷ, ನನ್ನ ತಮ್ಮ ಡಿ.ಕೆ.ಸುರೇಶ್ 25 ಲಕ್ಷ ಕೊಟ್ಟಿದ್ದಾನೆ. ನಮ್ಮ ಪಕ್ಷ ನಡೆಸುತ್ತಿದ್ದ ಪತ್ರಿಕೆಗೆ ದೇಣಿಗೆ ಕೊಟ್ಟರೆ ತಪ್ಪೇನು? ಟ್ರಸ್ಟ್ ವತಿಯಿಂದಲೂ ನ್ಯಾಷನಲ್ ಹೆರಾಲ್ಡ್​ಗೆ ದೇಣಿಗೆ ನೀಡಿದ್ದೇವೆ. ನಾವೇನು ಕದ್ದು ದೇಣಿಗೆ ಕೊಟ್ಟಿದ್ದೀವಾ? ಸಂಪಾದನೆ ಮಾಡಿದ ಆಸ್ತಿಯಿಂದ ರಾಜಾರೋಷವಾಗಿಯೇ ಕೊಟ್ಟಿದ್ದೇವೆ ಎಂದು ಡಿಸಿಎಂ ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಂಸದ ಡಿಕೆ ಸುರೇಶ್​ ಈ ಕುರಿತು ಪ್ರತಿಕ್ರಿಯಿಸಿ, ಯಂಗ್ ಇಂಡಿಯಾ ಟ್ರಸ್ಟ್ ಗೆ ಹಣ ಕೊಟ್ಟಿದ್ದೇವೆ. ಎರಡು, ಎರಡೂವರೆ ಕೋಟಿ ರೂ. ಹಣ ಕೊಟ್ಟಿದ್ದೇವೆ. ಈ ಸಂಬಂಧ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿದ್ದೇವೆ. ನಾವು ಕೊಟ್ಟಿಲ್ಲ ಅಂತ ಹೇಳುತ್ತಿಲ್ಲ. ದುರುದ್ದೇಶ ಪೂರ್ವಕವಾಗಿ ಆರೋಪ ಮಾಡುತ್ತಿದ್ದು, ನಮ್ಮ‌ಕಾಂಗ್ರೆಸ್ ನಾಯಕರ‌ಮೇಲೆ‌ಹೊರಿಸುವ ಪ್ರಯತ್ನ ಚಾರ್ಜ್‌ಶೀಟ್ ನಲ್ಲಿ ಮಾಡಿದ್ದಾರೆ. ನಾವು ಕಾನೂನಾತ್ಮಕವಾಗಿ‌ಹೋರಾಟ ಮಾಡುತ್ತೇವೆ.

ಇದು ರಾಜಕೀಯ ಪೂರಿತವಾದ ಪ್ರಕರಣ. ಸೋನಿಯಾ ಗಾಂಧಿಯವರ ಟ್ರಸ್ಟ್ ಅಲ್ಲ. ಯಂಗ್ ಇಂಡಿಯಾ ಸಂಸ್ಥೆಗೆ ಕೊಟ್ಟಿರೋದು. ಅವರು ವೈಯುಕ್ತಿಕವಾಗಿ ಹಣ ಬಳಸಿಕೊಂಡಿಲ್ಲ. ಅದು‌ಟ್ರಸ್ಟ್ ಗೆ ಬಳಕೆಯಾಗಿದೆ. ಇಡಿಯವರಿಗೂ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ಇದರಲ್ಲಿ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಸುರೇಶ್ ಅವರು ಖಡಕ್ ಆಗಿ ಮಾಹಿತಿ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ