Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಬೆಂಗಳೂರು ನಡಿಗೆ' ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಶಿವಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಲಾಲ್​ಬಾಗ್​ನಲ್ಲಿ ಬೆಂಗಳೂರು ನಡಿಗೆ ಆರಂಭಿಸಿದ್ದಾರೆ.
ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ
'ಬೆಂಗಳೂರು ನಡಿಗೆ' ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.


ಮುಂದಿ ನ 6 ದಿನಗಳವರೆಗೆ 6 ಪಾರ್ಕ್​ಗಳಲ್ಲಿ ನಡಿಗೆ ಮುಂದುವರಿಸಿ ಜನಾಭಿಪ್ರಾಯ ಆಲಿಸಲಿದ್ದಾರೆ.
ನಗರದ ಜನರ ಸಮಸ್ಯೆಗಳನ್ನು ಬೆಳಿಗ್ಗೆ
1 ತಾಸಿನ ನಡಿಗೆಯ ನಂತರ 1 ತಾಸು ಆಲಿಸುವ ಕಾರ್ಯ ಮಾಡಲಿದ್ದಾರೆ.


ಡಿಸಿಎಂ ಡಿ.ಕೆ ಶಿವಕುಮಾರ್ ಅವರೊಂದಿಗೆ ಲಾಲ್​ಬಾಗ್​ನಲ್ಲಿ ಸಾರ್ವಜನಿಕರು ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗಳು, ಕಸದ ಅವ್ಯವಸ್ಥೆ, ಆ್ಯಂಬುಲೆನ್ಸ್, ಟನಲ್ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದಲ್ಲಿ ಕಸದ ಸಮಸ್ಯೆ ಜಾಸ್ತಿಯಾಗಿದ್ದು, ಎಲ್ಲೆಂದರಲ್ಲಿ ಕಸ ಕಾಕುವವರಿಗೆ ದಂಡ ಹಾಕಿ ಎಂದು ಜನರು ಮನವಿ ಮಾಡಿದ್ದಾರೆ.

ಲಾಲ್​ಬಾಗ್​ನಲ್ಲಿ ಹೆಣ್ಣು ಮಕ್ಕಳು ಓಡಾಡುತ್ತಾರೆ. ಹೀಗಾಗಿ ಇಲ್ಲಿ ಸಿಸಿ ಕ್ಯಾಮೆರಾ ಅವಶ್ಯಕತೆಯಿರುವುದರಿಂದ 10 ಕೋಟಿ ರೂ.ಗಳನ್ನು ಲಾಲ್​ಬಾಗ್​ ಅಭಿವೃದ್ಧಿಗೆ ನೀಡುತ್ತೇನೆ ಎಂದು ಡಿಸಿಎಂ ತಿಳಿಸಿದ್ದಾರೆ.


ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ, ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆಂದು ಕೆಲವು ಮಾಧ್ಯಮಗಳು ಸುದ್ದಿಯನ್ನು ತಿರುಚಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ ಎಂದು ಡಿಸಿಎಂ ಮನವಿ ಮಾಡಿದರು.

ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ನಾನು ಆತುರದಲ್ಲಿ ಇಲ್ಲ. ಸಾರ್ವಜನಿಕರ ಸೇವೆ ಮಾಡಲು ಬಂದಿರುವೆ. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು, ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ನಡೆಸುವುದಿಲ್ಲ ಎಂದು ಡಿಸಿಎಂ ಎಚ್ಚರಿಸಿದರು.

ವಿವಾದ ಸೃಷ್ಟಿಗೆ ಯತ್ನ:
ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ
, ಅದರ ಅಗತ್ಯವೂ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ ಎಂದು ಡಿಸಿಎಂ ಶಿವಕುಮಾರ್ ಆರೋಪಿಸಿದರು.

ಸಂಪುಟ ವಿಸ್ತರಣೆ ಚರ್ಚೆ ನಡೆದಿಲ್ಲ :
ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಯಾವುದೇ ಚರ್ಚೆ ಸರ್ಕಾರದ ಮಟ್ಟದಲ್ಲಿ ನಡೆದಿಲ್ಲ. ಈ ಬಗ್ಗೆ ಏನಾದರೂ ಮಾಹಿತಿ ಇದ್ದಲ್ಲಿ ನಾನು
, ಇಲ್ಲವೇ ಮುಖ್ಯಮಂತ್ರಿಗಳು ನೀಡಬೇಕು. ಆದರೆ, ಪ್ರಸ್ತುತ ಆ ಸಂಬಂಧ ಯಾವುದೇ ಚರ್ಚೆಗಳು ನಡೆದಿಲ್ಲ. ಎಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಸುದ್ದಿಯಾಗುತ್ತಿದೆ ಎಂದು ಡಿಸಿಎಂ ಅವರು ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ