Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಗೆ ದಿಢೀರ್ ಭೇಟಿ ನೀಡಿದ ಡಿಸಿಎಂ ಶಿವಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ದಿಢೀರ್  ಭೇಟಿ ನೀಡಿದ್ದು ಸೋಮವಾರ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ.


ಡಿಕೆ.ಶಿವಕುಮಾರ್ ಅವರ ಭಾನುವಾರವೇ ದೆಹಲಿಗೆ ತೆರಳಿದ್ದಾರೆ. ಡಿಸಿಎಂ ಭೇಟಿ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜೂ.13ರಂದು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರ ವರಿಷ್ಠರ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊದಿಗೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಆಡಳಿತ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತು ಡಿ.ಕೆ.ಶಿವಕುಮಾರ್‌ ಸಭೆ ನಡೆಸಲಿದ್ದಾರೆ. ಬಳಿಕ ಜಲಶಕ್ತಿ ಸಚಿವರು, ಇಂಧನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದರ ನಡುವೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸೇರಿ ಇತ್ತೀಚಿನ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಜೂ.12ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜೂ.13 ರಂದು ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ದೆಹಲಿ ಭೇಟಿ ಸಂಪೂರ್ಣವಾಗಿ ತಾಂತ್ರಿಕವಾಗಿದೆ ಎಂದು ಹೇಳಿದರು. ಹೈದರಾಬಾದ್, ಚೆನ್ನೈ ಮತ್ತು ಈಗ ದೆಹಲಿಯಲ್ಲಿ ಈಗಾಗಲೇ ಜಾರಿಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ತಂತ್ರಜ್ಞಾನಗಳನ್ನು ಪರಿಶೀಲಿಸಲು ನಿರ್ಧರಿಸಿದ್ದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ವೀಕ್ಷಿಸಲು ನಾನು ಹಾಗೂ ಬೆಂಗಳೂರು ಪಾಲಿಕೆಯಿಂದ ಸುಮಾರು 15 ಸದಸ್ಯರ ತಂಡ ದೆಹಲಿಗೆ ಆಗಮಿಸಿದ್ದೇವೆ. ಇಲ್ಲಿ ನಗರದ ಹೊರಭಾಗದಲ್ಲಿ ವಾಸನೆ ರಹಿತವಾಗಿ ತ್ಯಾಜ್ಯ ವಿಲೇವಾರಿ ಕೇಂದ್ರ ಮಾಡಿದ್ದಾರೆ ಎಂದು ಕೇಳಿದ್ದೇನೆ.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಂಬಂಧ ಟೆಂಡರ್ ಕರೆಯಲಾಗಿದ್ದು, ಕಸದಿಂದ ಇಂಧನ, ಅನಿಲ ಉತ್ಪಾದನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈಗಾಗಲೇ ಹೈದರಾಬಾದ್ ಹಾಗೂ ಚೆನ್ನೈಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದೇನೆ. ದೆಹಲಿಯಲ್ಲಿನ ತಂತ್ರಜ್ಞಾನ ಅಳವಡಿಕೆ ಬಗ್ಗೆ ನಮಗೆ ಪ್ರಸ್ತಾವನೆ ಬಂದಿದ್ದು, ಹೀಗಾಗಿ ಅದನ್ನು ವೀಕ್ಷಣೆ ಮಾಡುತ್ತೇವೆ. ದೆಹಲಿಯಲ್ಲಿ ನಗರ ಯೋಜನಾ ಪ್ರಾಧಿಕಾರದಲ್ಲಿ ರಸ್ತೆ ವಿಚಾರವಾಗಿ ಪ್ರತ್ಯೇಕ ನೀತಿ ಹೊಂದಿದ್ದು, ಇದನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ಹೈಕಮಾಂಡ್ ನಾಯಕರ ಭೇಟಿ ಸಧ್ಯಕ್ಕೆ ಇಲ್ಲ. ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಜೂನ್.10 ರಂದು ಎತ್ತಿನಹೊಳೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಹೀಗಾಗಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ