ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ತಾಲೂಕಿನ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ರೈತರ ಭೂ ಹಿತರಕ್ಷಣಾ ಸಮಿತಿಯ ಪ್ರತಿನಿಧಿಗಳ ನಿಯೋಗವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿತು.
ತಮ್ಮ ಜಮೀನು ಹಾಗೂ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರೈತರು ಉಪಮುಖ್ಯಮಂತ್ರಿಗಳಿಗೆ ಸುದೀರ್ಘವಾಗಿ ಅಹವಾಲು ಸಲ್ಲಿಸಿ, ಸಮಾಲೋಚನೆ ನಡೆಸಿದರು.
ರೈತರ ಮನವಿಯನ್ನು ಆಲಿಸಿದ ಡಿ.ಕೆ. ಶಿವಕುಮಾರ್ ಅವರು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈ ಕುರಿತು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ಕಾನೂನು ಚೌಕಟ್ಟಿನೊಳಗೆ ರೈತರಿಗೆ ನ್ಯಾಯ ಸಿಗುವಂತೆ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು ಎಂದು ಅವರು ತಮ್ಮ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದ್ದು, ನಿಯಮಾನುಸಾರ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಭರವಸೆ ನೀಡಲಾಯಿತು. ಭೇಟಿಯ ವೇಳೆ ಸಮಿತಿಯ ಪ್ರಮುಖರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.


