Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ಉಳಿಸಿ ಬೆಳೆಸಬೇಕಿದ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್‌.ಸಿ ಮಹದೇವಪ್ಪ, ಕೆ.ಹೆಚ್‌ಮುನಿಯಪ್ಪ ಹಾಗೂ ಶಾಸಕ ಹ್ಯಾರಿಸ್‌ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭಾಗವಹಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ದಿನಾಚರಣೆಯೊಂದು ವಿಶೇಷವಾದ ಕಾರ್ಯಕ್ರಮವಾಗಿದೆ. ನಾವೆಲ್ಲರೂ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ನಮ್ಮದು ಇಡೀ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಬಸವಣ್ಣನವರ ನಾಡಿನಲ್ಲಿ ನಾವಿದ್ದೇವೆ. ಬಸವಣ್ಣನವರು ಅನುಭವ ಮಂಟಪ ಮಾಡಿ  ಸರ್ವರಿಗೆ ಸಮಪಾಲು, ಸರ್ವರಿಗೆ ಸಮಬಾಳು ಎಂಬ ವ್ಯವಸ್ಥೆಯನ್ನು ಮಾಡಿದರು.

 ಬ್ಯಾಲೆಟ್‌ಎನ್ನುವುದು ಬುಲೆಟ್‌ಗಿಂತ ಶಕ್ತಿಶಾಲಿ.  ನಾವೆಲ್ಲರೂ ಬ್ಯಾಲೆಟ್‌ಕಾಲಘಟ್ಟದಲ್ಲೇ ಹುಟ್ಟಿದವರು. ಬ್ಯಾಲೆಟ್‌ನಮಗೆ ಶಕ್ತಿ ಕೊಟ್ಟಿದೆ. ಜನರು ವೋಟ್‌ಹಾಕಿದ್ದಕ್ಕೆ ನಾವು ಶಾಸಕರು, ಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಾಗಿ ನಿಮ್ಮ ಮುಂದೆ ಇದ್ದೇವೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

ಪಂಚಾಯತ್‌ಯಿಂದ ಪಾರ್ಲಿಮೆಂಟ್‌ವರೆಗೆ ನಾಯಕರನ್ನು ಬೆಳೆಸುವುದು ನಮ್ಮ ಮೊದಲ ಕರ್ತವ್ಯವಾಗಿದೆ. ನಾಯಕರನ್ನು ಬೆಳೆಸದಿದ್ದರೆ ನಾವು ಯಶಸ್ಸನ್ನು ಕಾಣಲಿಕ್ಕೆ ಸಾಧ್ಯವಿಲ್ಲ. ನಾನು 7ನೇ ಕ್ಲಾಸ್‌ಅಲ್ಲೇ ಚುನಾವಣೆಗೆ ನಿಂತಿದ್ದೆ. ಆಗ ನನ್ನ ಚಿಹ್ನೆ ನಕ್ಷತ್ರವಾಗಿತ್ತು.  ಅಲ್ಲಿಂದ ಇಲ್ಲಿವರೆಗೆ ನಾನು ಬೆಳೆದಿದ್ದೇನೆ.

ಯುವ ನಾಯಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಮತದಾನದ ಶಕ್ತಿ ತಿಳಿಸಲು ಪ್ರಜಾಪ್ರಭುತ್ವ ದಿನಾಚರಣೆಯನ್ನು ನಾವು ಹಮ್ಮಿಕೊಂಡಿದ್ದೇವೆ.  ಬ್ಯಾಲೆಟ್‌ನಾಯಕರನ್ನು ತಯಾರು ಮಾಡುತ್ತದೆ. 18 ವರ್ಷಕ್ಕೆ ಮತದಾನದ ಹಕ್ಕನ್ನು ನೀಡಿದ್ದು ರಾಜೀವ್‌ಗಾಂಧಿಯವರು.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಪ್ರಜಾಪ್ರಭುತ್ವದಲ್ಲಿ ಅತ್ಯಮೂಲ್ಯವಾಗಿವೆ. ನಿಮ್ಮ ಆಶೀರ್ವಾದದಿಂದ ನಾವು 135 ಸೀಟ್ ಗೆದ್ದಿದ್ದು, ಈ ಮೂಲಕ ನೀವು ದೇಶಕ್ಕೆ ದೊಡ್ಡ ಸಂದೇಶ ನೀಡಿದ್ದೀರಿ.  ಈ ಪ್ರಜಾಪ್ರಭುತ್ವವನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕಿದೆ ಎಂದು ಡಿಸಿಎಂ ಶಿವಕುಮಾರ್ ಕರೆ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ