Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇಕೆದಾಟು ಯೋಜನೆಗೆ ಹೆಚ್ ಡಿಕೆ ಅನುಮತಿ ಕೊಡಿಸಲಿ, ನಮ್ಮೂರಲ್ಲೇ 2ನೇ ವಿಮಾನ ನಿಲ್ದಾಣ ಆಗಬೇಕೆನ್ನುವ ಆಸೆ ಇದೆ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಒಂದೇ ದಿನದಲ್ಲಿ ಮೇಕೆದಾಟು ಅಣೆಕಟ್ಟಿಗೆ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ
, ಮೊದಲು ಆ ಕೆಲಸ ಮಾಡಲಿ, ಆಮೇಲೆ ಮಾತಾಡಲಿ ಅವರು ಅಧಿಕಾರದಲ್ಲಿ ಇದ್ದಾಗ ಎರಡನೇ ವಿಮಾನ ನಿಲ್ದಾಣ ಮಾಡಲು ಯಾವುದೇ ಹೆಜ್ಜೆ ಇಡಲಿಲ್ಲ. ನಾವು ಈಗ ಹೆಜ್ಜೆ ಇಟ್ಟಿದ್ದೇವೆ ಎಂದು ದೇವೇಗೌಡರು 2ನೇ ವಿಮಾನ ನಿಲ್ದಾಣಕ್ಕೆ ಸದನದಲ್ಲಿ ಕೋರಿದ್ದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿರುಗೇಟು ನೀಡಿದರು.

ಡಿಸಿಎಂ ಅವರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣವನ್ನು ಎಲ್ಲಿ, ಯಾವ ಜಾಗದಲ್ಲಿ ಮಾಡಬೇಕು ಎನ್ನುವುದು ನಮ್ಮ ವ್ಯಾಪ್ತಿಯಲ್ಲಿಲ್ಲ. ಬಿಡದಿ, ನೆಲಮಂಗಲ, ತುಮಕೂರು, ಸೋಲೂರು ಹೀಗೆ ಯಾವ ಸ್ಥಳದಲ್ಲಿ ಬರಬೇಕು ಎಂಬುದನ್ನು ತೀರ್ಮಾನ ಮಾಡುವುದು ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರು ಎಂದು ಡಿಸಿಎಂ ಹೇಳಿದರು.

ಆದರೆ 2ನೇ ವಿಮಾನ ನಿಲ್ದಾಣವನ್ನು ಇಂತಿಷ್ಟು ವರ್ಷಗಳ ಕಾಲ ನಿರ್ಮಾಣ ಮಾಡಬಾರದು ಎನ್ನುವ ಒಪ್ಪಂದವಿದೆ. ಇದನ್ನು ಆ ಎರಡು ಸಂಸ್ಥೆಗಳು ತೀರ್ಮಾನ ಮಾಡುತ್ತವೆ ಎಂದು ತಿಳಿಸಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಯುತ್ತಿದೆ. ಅವರು ಮುಖ್ಯಮಂತ್ರಿಗಳು ಹಾಗೂ ನನ್ನ ಬಳಿ ಮಾತನಾಡಿ ಆ ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಪ್ರಾಧಿಕಾರದ ಅನುಮತಿ ಪಡೆದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.

ನಮ್ಮ ಊರಿನಲ್ಲೇ ವಿಮಾನ ನಿಲ್ದಾಣ ಆಗಬೇಕೆನ್ನುವ ಆಸೆ ಇದೆ. ಆದರೆ ಆ ರೀತಿ ಮಾಡಲು ಆಗುವುದಿಲ್ಲ. ವಿಮಾನ ನಿಲ್ದಾಣ ನಿರ್ಮಾಣ ಆಗಬೇಕು ಎಂದರೆ ಸಾಕಷ್ಟು ರೀತಿ, ರಿವಾಜುಗಳಿವೆ. ಗುಡ್ಡಗಳು ಇರಬಾರದು, ಫ್ಲೈಯಿಂಗ್ ಜೋನ್ ಇರಬೇಕು. ಹೀಗೆ ಸಾಕಷ್ಟು ನಿಯಮಗಳಿವೆ. ಅಲ್ಲದೇ ಒಟ್ಟು 4,400 ಎಕರೆ ಭೂಮಿ ಬೇಕು ಎಂದು ಅಂದಾಜಿಸಲಾಗಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ