Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ 327 ಬಾಣಂತಿಯರು ಸಾವು ನ್ಯಾಯವೇ-ಹೆಚ್ ಡಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ!! ಇದು ಆಘಾತವುಂಟು ಮಾಡಿದೆ ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಭಾರಿ ಕೈಗಾರಿಕಾ ಇಲಾಖೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರಕಾರ; ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವ ಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ!! ಇದೇನಾ ಮಹಿಳೆಯರ ಸಬಲೀಕರಣ? ಎಂದು ರಾಜ್ಯ ಸರ್ಕಾರವನ್ನು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು?

ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರ್ಕಾರ ಏನು ಮಾಡುತ್ತಿತ್ತು? ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು  ಅಲಕ್ಷ್ಯ ಮಾಡಿದ್ದೇಕೆ? ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಪಲಾಯನಕ್ಕಿಂತ ಪ್ರಾಯಶ್ಚಿತ್ತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಈ ಮರಣಗಳಿಂದ ಸರ್ಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್'ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಅವರು ಆಗ್ರಹ ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ