Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ, ಇಬ್ಬರು ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಸಾವು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಜೆ.ಸಿ.ಆರ್ ಬಡಾವಣೆ ಹತ್ತಿರ ರಾಷ್ಟ್ರೀಯ ಹೆದ್ದಾರಿ ೧೩ರ ಸೇತುವೆ ಬಳಿ  ಶನಿವಾರ ಮಧ್ಯರಾತ್ರಿ ಬೈಕ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಪ್ರಥಮ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಯಾಸೀನ್ ಮತ್ತು ಅಲ್ತಾಫ್ ಸ್ಥಳದಲ್ಲೇ ಸಾವನ್ನಪ್ಪಿದ್ದು
, ಮತ್ತೊರ್ವ ವಿದ್ಯಾರ್ಥಿ ನೇಬಿಲ್ ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮೂವರು ವಿದ್ಯಾರ್ಥಿಗಳು ಕೇರಳದ ಕೊಲ್ಲಂ ಜಿಲ್ಲೆಯ ಅಂಜಲ್ ಗ್ರಾಮದವರಾಗಿದ್ದು ಇಲ್ಲಿನ ಎಸ್.ಜೆ.ಎಂ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎಸ್ಸಿ ನರ್ಸಿಂಗ್ ಓದುತ್ತಿದ್ದರು. ಕಾಲೇಜಿನ ಆವರಣದಲ್ಲಿಂದು ಮೃತದೇಹಗಳನ್ನು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ದರ್ಶನಕ್ಕಾಗಿ ಇಡಲಾಗಿತ್ತು.

 ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಮೃತ ವಿದ್ಯಾರ್ಥಿಗಳಿಗೆ ಪುಷ್ಪನಮನ ಸಲ್ಲಿಸಿ, ದುಃಖತಪ್ತ ಪೋಷಕರಿಗೆ ಧೈರ್ಯ ಹೇಳಿದರು.

ಘಟನೆ ಕುರಿತು ತೀವ್ರ ನೋವನ್ನು ವ್ಯಕ್ತಪಡಿಸಿರುವ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ, ಸದಸ್ಯರಾದ ಡಾ. ಪಿ.ಎಸ್. ಶಂಕರ್ ಮತ್ತು ಎಸ್.ಎನ್ ಚಂದ್ರಶೇಖರ್ ಅವರುಗಳು ಮೃತ ಕುಟುಂಬಗಳಿಗೆ ಮಕ್ಕಳ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಥಮರು ನೀಡಲಿ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ರೆಡ್ಡಿ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ