Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ- ಜಿಲ್ಲಾಧಿಕಾರಿ ಎಸ್.ರಮ್ಯಾ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಡಿನ ಇತಿಹಾಸ
, ಕಲೆ ಹಾಗೂ ಸಾಂಸ್ಕೃತಿಕ ವೈಭವ ಸಾರುವ ನಿಟ್ಟಿನಲ್ಲಿ ಬರುವ ನವೆಂಬರ್ 01ರಂದು ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಹಿನ್ನಲೆಯಲ್ಲಿ ಜರುಗಿದ ಪೂರ್ವಭಾವಿ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ವೇದಿಕೆ ಸಮಿತಿಗಳನ್ನು ರಚಿಸಲಾಗಿದೆ. ಇದರನ್ವಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 7.30 ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಬಳಿಕ ಬೆಳಿಗ್ಗೆ 09 ಗಂಟೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ರಚನೆ ಮಾಡಲಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಹಾರ ಇಲಾಖೆ ವತಿಯಿಂದ ಮಕ್ಕಳಿಗೆ ಸಿಹಿವಿತರಣೆಗೆ ಕ್ರಮ ಕೈಗೊಳ್ಳಬೇಕು.  ವಿವಿಧ ಕ್ಷೇತ್ರಗಳಲ್ಲಿ ಸಾಧನೆ, ಸೇವೆ ಹಾಗೂ ವಯೋಮಿತಿಯನ್ನೂ ಪರಿಗಣಿಸಿ ಸಮಾಜಕ್ಕೆ ಕೊಡುಗೆ ನೀಡಿದ ಜಿಲ್ಲೆಯ ಮಹನೀಯರನ್ನು ಗೌರವ ಸನ್ಮಾನ ಮಾಡಲು ಉಪವಿಭಾಗಾಧಿಕಾರಿಗಳ ನೇತೃತ್ವದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ರಚಿಸಲಾಗಿದ್ದು, ಸಾಧಕರ ಆಯ್ಕೆ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಎಲ್ಲಾ ಸಮಿತಿಗಳು ಅಚ್ಚುಕಟ್ಟಾಗಿ ನಿರ್ವಹಿಸಿ, ರಾಜ್ಯೋತ್ಸವವನ್ನು ಆಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಡಿಎಆರ್ ಡಿವೈಎಸ್ಪಿ ಶ್ರೀನಿವಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಎಂ.ಜೆ.ಮಹೇಶ್,  ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರದ ದ್ವಂದ್ವ ನೀತಿ ಅಂತ್ಯಗೊಳ್ಳಲಿ; ಮದ್ಯ ಮಾರಾಟ ರದ್ದುಗೊಳಿಸಲು ಕ್ರಮ ಕೈಗೊಳ್ಳಲಿಕಲ್ಯಾಣದ ಸಂಕಟದಲ್ಲಿ ಮರಣವೇ ಮಹಾನವಮಿಸಿಜೆಪಿಗೆ ಕಾಂಗ್ರೆಸ್ ನೆರವು: 'ಖಜಾನೆ ಎಟಿಎಂ ಆಯಿತೇ?' - ಆರ್. ಅಶೋಕ್ ತೀವ್ರ ವಾಗ್ದಾಳಿಎ-ಖಾತಾ ಆಸ್ತಿ ಮಾಲೀಕರಿಗೆ ಮನೆಬಾಗಿಲಲ್ಲೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಅವಕಾಶ!ಗೂಗಲ್ ಮ್ಯಾಪ್ ಹೇಳಿದಂತೆ ಕೇಳಿ ದಾರಿತಪ್ಪಿ ಕಾರು ಸಮೇತ ಕಂದಕಕ್ಕೆ ಬಿದ್ದ ಇನ್ಫೋಸಿಸ್ ಟೆಕ್ಕಿಗಳು!ಲೈಂಗಿಕ ಕಿರುಕುಳ ಆರೋಪ: ತಲೆಮರೆಸಿಕೊಂಡಿದ್ದ ಚರ್ಚ್‌ಪಾದ್ರಿ ಪೋಕ್ಸೋ ಅಡಿಯಲ್ಲಿ ಬಂಧನಹಾರನಕಣಿವೆ ರಂಗನಾಥಸ್ವಾಮಿ ಅಂಬಿನೋತ್ಸವ: ಬುಡಕಟ್ಟು ಸಂಸ್ಕೃತಿ ಮತ್ತು ಪವಾಡದ ಅಪೂರ್ವ ಧಾರ್ಮಿಕ ಸಂಗಮಪ್ರಜ್ಞೆಯ ಜಾಗೃತಿ, ಬದುಕಿನ ಸಂಸ್ಕೃತಿ:ತಂತ್ರಜ್ಞಾನದ ಅತಿರೇಕ -ಸಾಮಾಜಿಕ ಸಾಮರಸ್ಯಕ್ಕೆ ಗಂಡಾಂತರ— ಜಾಗೃತಿ ಅಗತ್ಯಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ