Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೇಶದ ಪ್ರಮುಖ ನಾಲ್ಕು ರಾಜ್ಯಗಳಾದ ಪಶ್ಚಿಮ ಬಂಗಾಳ
, ಅಸ್ಸೋಂ, ತಮಿಳುನಾಡು, ಕೇರಳ ಮತ್ತು ಒಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭಾ ಚುನಾವಣೆ ಸೇರಿದಂತೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ಘೋಷಿಸಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್​ ಕುಮಾರ್​ ಅವರು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ ಮತ್ತು ಉಪಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ ಎಂದರು.

ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಮತದಾನ:
ಏಪ್ರಿಲ್ 23 ಮತ್ತು 29 ರಂದು ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ.
ತಮಿಳುನಾಡು
, ಅಸ್ಸೋಂ, ಪುದುಚೇರಿ ಮತ್ತು ಕೇರಳದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದರು.


ಒಂದೇ ಹಂತದ ಮತದಾನ:
ಏಪ್ರಿಲ್ 23 ರಂದು ತಮಿಳುನಾಡು ಹಾಗೂ ಪುದುಚೇರಿ
, ಕೇರಳ ಮತ್ತು ಅಸ್ಸೋಂನಲ್ಲಿ ಎಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 824 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಹಿಂಸಾಚಾರ ಅಥವಾ ಪ್ರಚೋದನೆಯಿಂದ ಚುನಾವಣೆಗಳು ಮುಕ್ತವಾಗಿರುವಂತೆ ಕ್ರಮ ಕೈಗೊಳ್ಳುತ್ತೇವೆ. ಯಾವುದೇ  ರೀತಿಯ ಚುನಾವಣಾ ನೀತಿಯ ಉಲ್ಲಂಘನೆ ವಿರುದ್ಧ ಚುನಾವಣಾ ಆಯೋಗವು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಇಬ್ಬರು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಜೊತೆಗಿದ್ದ ಜ್ಞಾನೇಶ್ ಕುಮಾರ್ ಎಚ್ಚರಿಕೆ ನೀಡಿದರು.
ನೀತಿ ಸಂಹಿತೆ ಜಾರಿ: ಚುನಾವಣಾ ವೇಳಾಪಟ್ಟಿ ಘೋಷಣೆ ಜೊತೆಗೆ ಮಾದರಿ ನೀತಿ ಸಂಹಿತೆಯೂ ಚುನಾವಣೆ ಘೋಷಣೆಯಾದ ಎಲ್ಲ ರಾಜ್ಯಗಳಲ್ಲಿಯೂ ತಕ್ಷಣದಿಂದ ಜಾರಿಗೆ ಬಂದಿದೆ.


ರಾಜ್ಯವಾರು ವಿಧಾನಸಭಾ ಕ್ಷೇತ್ರಗಳ ಮಾಹಿತಿ:
ತಮಿಳುನಾಡಲ್ಲಿ - 234 ಕ್ಷೇತ್ರಗಳು, ಪಶ್ಚಿಮ ಬಂಗಾಳ - 294 ಕ್ಷೇತ್ರಗಳು, ಕೇರಳ - 140 ಕ್ಷೇತ್ರಗಳು, ಅಸ್ಸೋಂ - 126 ಕ್ಷೇತ್ರಗಳು ಹಾಗೂ ಪುದುಚೇರಿಯಲ್ಲಿ 33 ಕ್ಷೇತ್ರಗಳಿವೆ.


ಈ ರಾಜ್ಯಗಳು ಸೇರಿದಂತೆ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 17.4 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಹಾಗೆಯೇ 2.18 ಲಕ್ಷಕ್ಕೂ ಹೆಚ್ಚು ಮತಗಟ್ಟೆ ಸ್ಥಾಪಿಸಲಾಗುವುದು ಹಾಗೂ ಸುಮಾರು 25 ಲಕ್ಷ ಚುನಾವಣಾ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದು ಅವರು ವಿವರಿಸಿದರು.
ಎಲ್ಲ ಮತಗಟ್ಟೆಗಳಲ್ಲಿ ಮೊದಲ ಬಾರಿಗೆ ಶೇ.100ರಷ್ಟು ವೆಬ್‌ಕಾಸ್ಟಿಂಗ್ ಮಾಡಲಾಗುತ್ತದೆ. ಜೊತೆಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲಾಗುವುದು ಎಂದು ಚುನಾವಣಾ ಆಯುಕ್ತ ತಿಳಿಸಿದರು.


4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಸುಮಾರು 20 ದೇಶಗಳ ವೀಕ್ಷಕರು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಎರಡು ಕ್ಷೇತ್ರಗಳಿಗೆ ಉಪಚುನಾವಣೆ:
ಕರ್ನಾಟಕದ ಎರಡು ಕ್ಷೇತ್ರಗಳಿಗೆ ಏಪ್ರಿಲ್​ 09 ರಂದು ಉಪ ಚುನಾವಣೆ ನಡೆಯಲಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಮತ್ತು ಹೆಚ್​ ವೈ ಮೇಟಿ ಅವರ ಅಗಲಿಕೆಯಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರಕ್ಕೂ ಎಪ್ರಿಲ್​ 09 ರಂದು ಉಪಚುನಾವಣೆ ನಡೆಯಲಿದೆ. ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ ಭಾನುವಾರ ಘೋಷಿಸಿದರು.


 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ