Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಜಾತ್ಯಾತೀತ ಜನತಾದಳದಿಂದ ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.


ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ವಸತಿ ಸಚಿವ ಜಮೀರ್ ಅಹಮದ್ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ ವಸತಿ ಸಚಿವ ಜಮೀರ್ ಅಹಮದ್ ಮನೆಗಳನ್ನು ನೀಡಲು ಬಡವರಿಂದ ಲಂಚ ಪಡೆದಿದ್ದಾರೆಂದು ಅವರ ಪಕ್ಷದ ಶಾಸಕರುಗಳೆ ಆದ ಬಿ.ಆರ್.ಪಾಟೀಲ್, ರಾಜು ಕಾಗೆ ಆಪಾದಿಸುತ್ತಿದ್ದಾರೆ. ಬಿಟ್ಟಿ ಭಾಗ್ಯಗಳನ್ನು ನೀಡಿ ರಾಜ್ಯದ ಜನತೆಯನ್ನು ಮರಳು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅಭಿವೃದ್ದಿ ಕುಂಠಿತಗೊಂಡಿದೆ. ಕೂಡಲೆ ಸಚಿವ ಜಮೀರ್ ಅಹಮದ್‌ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುವುದು ಬೇಡ ಎಂದು ಆಗ್ರಹಿಸಿದರು.

ಜೆಡಿಎಸ್ ಮಾಜಿ ಅಧ್ಯಕ್ಷ ಡಿ.ಯಶೋಧರ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಯನ್ನು ಉಚಿತ ಭಾಗ್ಯಗಳ ಭ್ರಮೆಯಲ್ಲಿ ತೇಲಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ದಿ ನಿಗಮದ ಹಣವನ್ನು ಲೂಟಿ ಹೊಡೆಯಲಾಗಿದೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯಿಲ್ಲ. ಕೂಡಲೆ ರಾಜಿನಾಮೆ ನೀಡುವುದರ ಜೊತೆಗೆ ವಸತಿ ಜಮೀರ್ ಅಹಮದ್‌ರವನ್ನು ಸಚಿವ ಸ್ಥಾನದಿಂದ ಉಚ್ಚಾಟಿಸಬೇಕು. ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರವಾಗಿದೆ ಎಂದರು.

ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ರೀತಿಯ ಹಗರಣದಲ್ಲಿ ಕಾಂಗ್ರೆಸ್ ಸರ್ಕಾರ ಸಿಲುಕಿಕೊಂಡಿದೆ. ವಸತಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಠಾಚಾರವಾಗಿರುವುದನ್ನು ಸಂಪೂರ್ಣ ತನಿಖೆಗೊಳಪಡಿಸಬೇಕು. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು.



ಹಿರಿಯೂರು ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ರವೀಂದ್ರಪ್ಪ ಮಾತನಾಡಿ ರಾಜ್ಯದ ಜನ ಯಾರು ಉಚಿತ ಭಾಗ್ಯಗಳನ್ನು ಕೇಳಿಲ್ಲ. ಸಿದ್ದರಾಮಯ್ಯ ಪಂಚ ಗ್ಯಾರೆಂಟಿಗಳನ್ನು ಘೋಷಿಸಿ ಜನತೆಯನ್ನು ಸೋಮಾರಿಗಳನ್ನಾಗಿ ಮಾಡಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್‌ರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಪಿ.ಟಿ.ತಿಪ್ಪೇಸ್ವಾಮಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಹನುಮಂತರಾಯಪ್ಪ,

ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಪರಮೇಶ್ವರಪ್ಪ, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಗಣೇಶ್‌ಮೂರ್ತಿ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ವೀರಭದ್ರಣ್ಣ, ಶಿವಶಂಕರ್, ನಗರಸಭೆ ಸದಸ್ಯರುಗಳಾದ ಸೈಯದ್ ನಸ್ರುಲ್ಲಾ, ದೀಪಕ್, ಮಾಜಿ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಜೆಡಿಎಸ್.ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ