Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸರ್ಕಾರಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸಿ- ಸಚಿವ ಟಿ. ರಘುಮೂರ್ತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಜನಸಾಮಾನ್ಯರಿಗೆ ನೇರವಾಗಿ ತಲುಪುವಂತಾಗಬೇಕು. ಕೇವಲ ಕಾರ್ಯಕ್ರಮಗಳ ಆಯೋಜನೆಗೆ ಸೀಮಿತವಾಗದೆ, ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಸೂಚಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪ್ರಜಾಸೇವಾ ಇಲಾಖೆ ವತಿಯಿಂದ ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌಧದ ಶ್ರೀಮಹರ್ಷಿ ವಾಲ್ಮೀಕಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 'ಪ್ರಜಾಸೇವಾ ಆಂದೋಲನ' ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ರಾಜ್ಯ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನಕ್ಕಾಗಿ ಪ್ರತ್ಯೇಕ ಇಲಾಖೆ ತೆರೆಯಲಾಗಿದೆ. ಸ್ವತಃ ಮುಖ್ಯಮಂತ್ರಿಗಳೇ ಇದರ ಉಸ್ತುವಾರಿ ವಹಿಸಿದ್ದಾರೆ. ಹೋಬಳಿ ಹಾಗೂ ತಾಲೂಕು ಮಟ್ಟದ ಸಭೆಗಳಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಹ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಲು ಸೂಚಿಸಲಾಗಿದೆ. ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ನೇರವಾಗಿ ರಾಜ್ಯ ಮಟ್ಟಕ್ಕೆ ತಲುಪಿಸಿ ಪರಿಹಾರ ಕಂಡುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾಯಾರ್ಂಗ ವ್ಯವಸ್ಥೆಯಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವುದು ಅತ್ಯಗತ್ಯ. ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಅಧಿಕಾರಿಗಳು ಮೊದಲ ಆದ್ಯತೆ ನೀಡಬೇಕು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪರಸ್ಪರ ಸಹಯೋಗದೊಂದಿಗೆ ಕೆಲಸ ಮಾಡಿದಾಗ ಮಾತ್ರ ಸರ್ಕಾರದ ಆಶಯ ಈಡೇರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕೇಂದ್ರದ ಎನ್‍ಡಿಆರ್‍ಎಫ್ ನಿಯಮಾವಳಿಗಳಂತೆ ಚಳ್ಳಕೆರೆ, ಹಿರಿಯೂರು ಮತ್ತು ಹೊಸದುರ್ಗ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಇದೀಗ ಚಿತ್ರದುರ್ಗ, ಹೊಳಲ್ಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳು ಕೂಡ ಬರಪೀಡಿತ ಪ್ರದೇಶಗಳ ಸಾಲಿಗೆ ಸೇರಲು ಅರ್ಹತೆ ಪಡೆದುಕೊಂಡಿವೆ. ಉಪಗ್ರಹ ಮಾಹಿತಿ, ಮಣ್ಣಿನ ತೇವಾಂಶ, ಬೆಳೆ ನಷ್ಟ ಹಾಗೂ ಕುಡಿಯುವ ನೀರಿನ ಅಭಾವದ ವರದಿಗಳನ್ನು ಆಧರಿಸಿ ಶೀಘ್ರವಾಗಿ ಈ ತಾಲ್ಲೂಕುಗಳಲ್ಲಿ ಬರ ಘೋಷಿಸಲಾಗುವುದು ಎಂದು ಮಾಹಿತಿ ನೀಡಿದರು.

ನಾಲೆ ಹಾನಿ ಕಾನೂನು ಕ್ರಮದ ಎಚ್ಚರಿಕೆ: ಚಿತ್ರದುರ್ಗ ಬ್ರಾಂಚ್ ಕೆನಾಲ್‍ಗೆ ಪ್ರಾಯೋಗಿಕವಾಗಿ ಭದ್ರಾ ನೀರು ಹರಿಸಲಾಗುತ್ತಿದೆ. ಕೆಲವೆಡೆ ಜನರು ತಮ್ಮ ಭಾಗದ ಕೆರೆಗಳಿಗೆ ನೀರು ಹರಿಸುವ ಕುರಿತು, ಅನಗತ್ಯವಾಗಿ ಆತಂಕಗೊಂಡು, ನಾಲೆ ಒಡೆದು ನೀರು ಪೆÇೀಲು ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕ ಆಸ್ತಿ ಹಾಗೂ ಮೂಲಸೌಕರ್ಯಗಳನ್ನು ನಾಶಪಡಿಸಿ ನೀರು ಪಡೆಯುವುದು ಕಾನೂನುಬಾಹಿರ ಮತ್ತು ತಪ್ಪಾದ ಮಾರ್ಗವಾಗಿದೆ. ಈ ರೀತಿಯ ಕೃತ್ಯ ಎಸಗುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಸಚಿವ ಟಿ. ರಘುಮೂರ್ತಿ ಎಚ್ಚರಿಸಿದರು.

ಸದ್ಯಕ್ಕೆ 0.60 ಟಿಎಂಡಿಸಿ ನೀರು ಮಾತ್ರ ಹರಿದು ಬಂದಿದೆ. ಇನ್ನು 2.40 ಟಿಎಂಡಿಸಿ ನೀರು ಹರಿಯಲಿದ್ದು, ಸುಮಾರು ಒಂದು ತಿಂಗಳ ಕಾಲ ನೀರು ಬರಲಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿಎಂಡಿಸಿ ನೀರನ್ನು ವಿವಿಧ ತಾಲೂಕುಗಳಿಗೆ ಹಂಚಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ಕೆರೆಗಳನ್ನು ತುಂಬಿಸಲಾಗುವುದು. ಆದ್ದರಿಂದ ರೈತರು ಯಾವುದೇ ಕಾರಣಕ್ಕೂ ಆತಂಕ ಪಡದೆ ಸಮಾಧಾನದಿಂದ ಇರಬೇಕು ಹಾಗೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ವಿನಂತಿಸಿದರು.

ತಾಲೂಕನ್ನು ಬರಪೀಡಿತವೆಂದು ಘೋಷಿಸಿ: ಶಾಸಕ ಚಂದ್ರಪ್ಪ ಆಗ್ರಹ
ಕಳೆದ 100 ವರ್ಷಗಳ ಇತಿಹಾಸದಲ್ಲಿ ಜಿಲ್ಲೆ ಸುಮಾರು 76 ವರ್ಷಗಳ ಕಾಲ ಬರ ಪರಿಸ್ಥಿತಿಯನ್ನೇ ಎದುರಿಸಿದೆ. ಸದ್ಯ ಹೊಳಲ್ಕೆರೆ ತಾಲೂಕಿನಲ್ಲಿ ಭೀಕರ ಅಭಾವ ಪರಿಸ್ಥಿತಿ ತಲೆದೋರಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ತಾಲೂಕನ್ನು ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಗೆ ಹಂಚಿಕೆಯಾಗಿರುವ 12.5 ಟಿಎಂಸಿ ನೀರಿನಲ್ಲಿ, ಕೇವಲ 3 ಟಿಎಂಸಿ ಮಾತ್ರ ಹರಿಸಲಾಗುತ್ತದೆ.ಹೊಳಲ್ಕೆರೆ, ಚಿತ್ರದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕುಗಳಿಗೆ ಕೇವಲ 3 ಟಿಎಂಸಿ ನೀರು ಹಂಚಿಕೆ ಮಾಡಿದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಪ್ರಸ್ತುತ ಜಲಾಶಯದಲ್ಲಿ ಲಭ್ಯವಿರುವ ನೀರಿಗೆ ಅನುಗುಣವಾಗಿ ಉಳಿದ ನೀರನ್ನು ತಕ್ಷಣ ಹರಿಸಬೇಕು. ಚಿಕ್ಕಂದವಾಡಿ, ಸಾಸುಲುಹಳ್ಳಿ ಸೇರಿದಂತೆ ತಾಲ್ಲೂಕಿನ 11 ಕೆರೆಗಳನ್ನು ಭದ್ರಾ ಯೋಜನೆಯ ವ್ಯಾಪ್ತಿಗೆ ಸೇರಿಸುವಂತೆ ಎಂದು ಈ ವೇಳೆ ಶಾಸಕ ಡಾ. ಎಂ. ಚಂದ್ರಪ್ಪ ಒತ್ತಾಯಿಸಿದರು.

ಜನರು ಸಲ್ಲಿಸಿರುವ ಅರ್ಜಿ ಹಾಗೂ ಕುಂದುಕೊರತೆಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ, ಒಂದು ವಾರದೊಳಗೆ ಸೂಕ್ತ ನ್ಯಾಯ ಒದಗಿಸಬೇಕು. ತಲೆತಲಾಂತರದಿಂದ ಉಳಿಸಿಕೊಂಡು ಬಂದಿರುವ ಖಾತೆ ಬದಲಾವಣೆ ಹಾಗೂ ನಿವೇಶನಗಳ ಹಕ್ಕುಪತ್ರ ಸಿಗದೆ ಹಲವು ವರ್ಷಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸಭೆಯು ಕೇವಲ ನಾಮಕಾವಸ್ಥೆಯಾಗದೆ, ಬಡವರು ಹಾಗೂ ಕಷ್ಟದಲ್ಲಿರುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸೌಲಭ್ಯಗಳ ವಿತರಣೆ: ಪ್ರಜಾಸೇವಾ ಆಂದೋಲನದ ಅಂಗವಾಗಿ ಸಂವಿಧಾನ ಸೌಧದ ಆವರಣದಲ್ಲಿ ಕೃಷಿ, ತೋಟಗಾರಿಕೆ, ಮೀನು, ಅರಣ್ಯ, ಪಟ್ಟಣ ಪಂಚಾಯಿತಿ, ರೇಷ್ಮೆ ವಿಕಲಚೇತನ, ಆರೋಗ್ಯ ಸೇರಿದಂತೆ ಹಲವು ಇಲಾಖೆಗಳ ಸೌಲಭ್ಯಗಳ ಕುರಿತಾದ ಸ್ಟಾಲ್‍ಗಳನ್ನು ಹಾಕಲಾಗಿತ್ತು. ಸಚಿವ ಟಿ.ರಘುಮೂರ್ತಿಯವರು ಸ್ಟಾಲ್‍ಗಳನ್ನು ಉದ್ಘಾಟಿಸಿ, ವಿಕಲಚೇತನರ ಇಲಾಖೆ ಸಂಬಂಧಿಸಿದ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಿದರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅಧಿಕಾರಿಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದರು.

ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ತಾಲ್ಲೂಕೂ ಅಧ್ಯಕ್ಷ ಹುನುಮಂತಪ್ಪ, ಜಿಲ್ಲಾಧಿಕಾರಿ ಎಸ್.ರಮ್ಯ, ಜಿ.ಪಂ.ಸಿಇಓ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜತ್ ಕುಮಾರ್ ಬಂಡರು,  ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿರಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ