ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅತ್ಯಾಧುನಿಕ 'ಜ್ಯುವೆಲ್ಲರಿ ಪಾರ್ಕ್' ಸ್ಥಾಪನೆಗೆ ಅಗತ್ಯವಿರುವ ಸೂಕ್ತ ಜಮೀನನ್ನು ಶೀಘ್ರವೇ ಮಂಜೂರು ಮಾಡುವಂತೆ ಕೋರಿ 'ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್' ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಅಧಿಕೃತ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಆಭರಣ ರಂಗದ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಉದ್ಯಮಿಗಳು ಎದುರಿಸುತ್ತಿರುವ ವಿವಿಧ ಪ್ರಚಲಿತ ಸವಾಲುಗಳ ಕುರಿತು ಸಿಎಂ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.
ನಿಯೋಗದಲ್ಲಿ ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್‌ನ ಪ್ರಮುಖ ಪದಾಧಿಕಾರಿಗಳು ಹಾಗೂ ಒಕ್ಕೂಟದ ಹಿರಿಯ ಸದಸ್ಯರು ಭಾಗವಹಿಸಿದ್ದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ವಿಷಯದ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.




