Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೊಳ್ಳೆ ನಿರ್ಮೂಲನೆ ಆಗಿದಿದ್ದರೆ ಡೆಂಗ್ಯೂ ಜ್ವರ ನಿಯಂತ್ರಣ ಕಷ್ಟ ಸಾಧ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸೊಳ್ಳೆಗಳ ನಿಯಂತ್ರಣದ ಹೊರತು ಡೆಂಗ್ಯೂ ಜ್ವರ ನಿಯಂತ್ರಿಸುವುದು ಕಷ್ಟ ಸಾಧ್ಯ ಎಂದು ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ ಕಡಿ ಹೇಳಿದರು.

  ನಗರದ ಚೇಳುಗುಡ್ಡ ಸಮೀಪದ ಮದೀನಾ ಮುನಾವರ ಮಸೀದಿ ಮುಂಭಾಗದ ರಸ್ತೆಗಳಲ್ಲಿ ಮಂಗಳವಾರ ಡೆಂಗ್ಯೂ ಜ್ವರದ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಜಾಗೃತಿ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.

ಡೆಂಗ್ಯೂ ಜ್ವರವು ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ ಮತ್ತು ನಾಲ್ಕು ಸಂಬಂಧಿತ ಡೆಂಗ್ಯೂ ವೈರಸ್ಗಳಿಂದ ಉಂಟಾಗುತ್ತದೆ. ರೋಗವನ್ನು "ಮುರಿದ-ಮೂಳೆ" ಜ್ವರ ಎಂದು ಕರೆಯಲಾಗುತ್ತಿತ್ತು. ಏಕೆಂದರೆ ಇದು ಕೆಲವೊಮ್ಮೆ ತೀವ್ರವಾದ ಕೀಲು ಮತ್ತು ಸ್ನಾಯು ನೋವನ್ನು ಉಂಟುಮಾಡುತ್ತದೆ ಮತ್ತು ಮೂಳೆಗಳು ಮುರಿಯುತ್ತಿರುವಂತೆ ಭಾಸವಾಗುತ್ತದೆ ಎಂದು ಹೇಳಿದರು.

ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ವಾರಕ್ಕೊಮ್ಮೆಯಾದರೂ ನಿಮ್ಮ ಮನೆಯ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಛವಾಗಿ ತೊಳೆದು ನೀರನ್ನು ಸಂಗ್ರಹಿಸಿ ಮುಚ್ಚಳವನ್ನು ಮುಚ್ಚಿಯಿಡಿ ಡ್ರೈ ಡೇ ಆಚರಿಸಿ ಅಲ್ಲದೆ ದಿನ ಇಲಾಖೆಯು ನಿಮ್ಮ ಮನೆಯ ತೊಟ್ಟಿಗಳಿಗೆ ಲಾರ್ವಾಹಾರಿ ಮೀನುಗಳನ್ನು ವಿತರಿಸಲಾಗುತ್ತಿದೆ. ಇವುಗಳನ್ನು ಊಟಕ್ಕೆ ಉಪಯೋಗಿಸಲು ಬರುವುದಿಲ್ಲ. ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುತ್ತದೆ; ಕೀಟ ಚಿಕ್ಕದು ಬಾದೆ ದೊಡ್ಡದು ಎಂಬ ನಾಣ್ಣುಡಿ ಅಂತೆ ಸಾರ್ವಜನಿಕರು ಸೊಳ್ಳೆಗಳ ಕಡಿತದಿಂದ ಸ್ವಯಂ ರಕ್ಷಣೆ ಪಡೆಯಬೇಕು ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್ ಮಾತನಾಡಿದರು.  ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಜಿಲ್ಲಾ ಮಲೇರಿಯಾ ವಿಭಾಗದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀನಿವಾಸ್ ಮಳಲಿ, ನಾಗರಾಜ್, ನೆಹರು ನಗರ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗುರುಮೂರ್ತಿ, ಗೋಪಾಲಕೃಷ್ಣ, ಕೀಟ ಸಂಗ್ರಹಕಾರರಾದ ಶ್ರೀಕಾಂತ್, ಕಾವ್ಯ , ಆಶಾ ಕಾರ್ಯಕರ್ತೆಯರಾದ ಅಭಿನಯ, ಗೀತಾ, ಸಾರ್ವಜನಿಕರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ