Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ: 
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಗಳಿಗಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವೆಬ್‍ಸೈಟ್ https://ssp.postmatric.karnataka.gov.in/  ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಇಲಾಖೆಯ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in  ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅಥವಾ ಇಮೇಲ್ [email protected]  ಮೂಲಕ ಸಂಪರ್ಕಿಸಬಹುದು. ತಾಂತ್ರಿಕ ನೆರವಿಗಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ 1902 ಅಥವಾ ಇಮೇಲ್ [email protected]  ಅನ್ನು ಸಂಪರ್ಕಿಸಲು ಕೋರಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕೆಲವರ ಮಾತು ಕೇಳಿ ಬಿಡದಿ ಟೌನ್‌ಶಿಪ್ ಕೈಬಿಡಲ್ಲ": ಸಚಿವ ಯತೀಂದ್ರಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಸಿಎಂ ಶಿವಕುಮಾರ್ ಸೂಚನೆಮಹಿಳೆಯರಿಗೆ ಉಚಿತ 'ಸ್ಮಾರ್ಟ್ ಕಾರ್ಡ್'; ಶೀಘ್ರದಲ್ಲೇ ಅಂತಿಮ ರೂಪುರೇಶೆ ಎಂದ ಸಚಿವ ಬೈರತಿ ಸುರೇಶ್ವಿಧಾನ ಪರಿಷತ್ ಚುನಾವಣೆ: ಕ್ರಾಸ್ ವೋಟಿಂಗ್ ಭೀತಿ; ಬಿಡದಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್!ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ; ಬಲವಂತದ ಮತಾಂತರಕ್ಕೆ ಯತ್ನ ಇಬ್ಬರ ಬಂಧನ"ಶ್ರೀರಾಮನೇ ಲೆಕ್ಕ ಕೊಡುವಾಗ ಆರ್‌ಎಸ್‌ಎಸ್ ಯಾಕೆ ಕೊಡಬಾರದು?": ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆದೂರು ದಾಖಲಾಗುವ ಮುನ್ನವೇ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು! ಹೈಕೋರ್ಟ್ ಆಘಾತನಗರಾಭಿವೃದ್ಧಿ ಜವಾಬ್ದಾರಿ ವಹಿಸಿಕೊಂಡ ಕೃಷ್ಣಬೈರೇಗೌಡ; ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ 'ರಾಕೆಟ್ ಸೈನ್ಸ್' ಕ್ಲಾಸ್!ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ; ಕೊಲೆ ಆರೋಪಿ ಮಧು ಕಾಲಿಗೆ ಬಿದ್ದಿತು ಗುಂಡೇಟು!ರೌಡಿಪಟ್ಟಿಯಿಂದ ಸೈಲೆಂಟ್ ಸುನೀಲ, ಒಂಟೆ ರೋಹಿತ್ ಮುಕ್ತಿ? ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಜ್ಜು!