Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಗಿ ಖರೀದಿ ಕೇಂದ್ರಕ್ಕೆ ಉಪ ಲೋಕಾಯುಕ್ತರ ದಿಢೀರ್ ಭೇಟಿ, ರೈತರಿಗೆ ಮೋಸ: ಸುಮೊಟೋ ಕೇಸ್ ಫಿಕ್ಸ್ 

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ‌ ಕೇಂದ್ರ, ರಾಗಿ ತೂಕ ಹಾಕುವ ಕೇಂದ್ರ(Weighbridge) ಕೇಂದ್ರ, ಸರ್ಕಾರಿ ಆಸ್ಪತ್ರೆ ಬಳಿ ಇರುವ ಉಗ್ರಾಣ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ‌ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.

 ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರೈತರ ಅನುಕೂಲಕ್ಕಾಗಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿರುವ ನೋಂದಣಿ ಕೇಂದ್ರದಲ್ಲಿ ಅವ್ಯವಸ್ಥೆಗಳಿಂದ ತುಂಬಿ‌ ತುಳುಕುತ್ತಿದೆ. ಕುಡಿಯುವ ನೀರಿನ‌ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ತೂಕದಲ್ಲಿ ಮೋಸ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ರೈತರು ಪರದಾಡುತ್ತಿದ್ದಾರೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಕಿಡಿಕಾರಿದರು.

 ರಾಗಿ ಖರೀದಿಗಾಗಿ ತೆರೆದಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲ ರೈತರು ಆಗಮಿಸುತ್ತಿದ್ದಾರೆ. ಇವರಿಗೆ ಸ್ಥಳದಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿಲ್ಲ. ರೈತರನ್ನು ಕಾಯಿಸದೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಿಲ್ಲ. ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ವಯ ರಾಗಿಯನ್ನು ಖರೀದಿಸುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು.

ರಾಗಿ ತೂಕ ಹಾಕುವ ಕೇಂದ್ರ(Weighbridge)ದಲ್ಲಿ ತೂಕದಲ್ಲಿ ಏರುಪೇರು ಆಗಿ ರೈತರಿಗೆ ಮೋಸ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ರಾಗಿ ಉಗ್ರಾಣ ಕೇಂದ್ರದಲ್ಲಿ ಸರ್ಕಾರಿ ಚೀಲ 50ಕೆ.ಜಿ ಎಂದು ಇರುತ್ತದೆ. ಆದರೆ, ತೂಕ ಹಾಕಿದಾಗ 44, 42, 45, 48, 49 ಕೆ.ಜಿ ಬರುತ್ತಿದೆ ಎಂದರು.

ಅಧಿಕಾರಿಗಳ ಬೇಜವಾಬ್ದಾರಿ, ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಭಾರೀ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಅವರ ಮೇಲೆ ಇವರು, ಇವರ ಮೇಲೆ ಅವರು ಹೇಳಿ ಕಡೆಗೆ ಅದಕ್ಕು  ನಮಗು ಯಾವ ಸಂಬಂಧವಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

 ರೈತ ಬಿತ್ತನೆ ಬಿತ್ತಿ ಬೆಳೆ ಬೆಳೆದು ಮಾರಾಟ ಮಾಡುವವರಿಗೂ ಇಂತಹ ಅಧಿಕಾರಿಗಳಿಂದ ವಂಚನೆ ಒಳಗಾಗುತ್ತಿದ್ದಾನೆ‌. ಇಲ್ಲಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದಾಗಿದೆ ಇಲ್ಲಿನ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ರೈತರಿಗೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ. ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸುಮಟೋ ಕೇಸ್ ದಾಖಲು ಮಾಡುತ್ತಾನೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಖಂಡಿತ ಕ್ರಮ ಜರುಗಿಸುತ್ತೇನೆ ಎಂದು ಹೇಳಿದರು.

ಸ್ಥಳದಲ್ಲಿ ಕುಡಿಯುವ ನೀರು, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪುರುಷ,‌ ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ಕೌಂಟರ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಮೂರು ದಿನಗಳೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.

ತೂಕ ನಿಯಮಬದ್ಧವಾಗಿ ಹಾಕಬೇಕು, ರಾಗಿ ಚೀಲದ ತೂಕದಲ್ಲಿ ಮೋಸವಾಗಬಾರದು, ಸರ್ಕಾರದ ಯೋಜನೆಯನ್ನು ರೈತರಿಗೆ ಯಾವುದೇ ಅನ್ಯಾಯ ಮಾಡದೇ ರೈತರಿಗೆ ತಲುಪುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾ‌ಮಹೇಶ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ