Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜ್ಞಾನದಿಂದ ಮಕ್ಕಳ ಮನಸ್ಸು ವಿಕಾಸ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
"ವಿಜ್ಞಾನದಿಂದ ನಮ್ಮ ಜೀವನ ಶೈಲಿಯೇ ಬದಲಾಗಿದೆ. ಇಂತಹ ವಿಜ್ಞಾನ ಮೇಳಗಳಲ್ಲಿ ಭಾಗವಹಿಸುವ ಮೂಲಕ ಅವರ ಮನಸ್ಸು ವಿಕಾಸ ವಾಗುತ್ತದೆ. ಅನೇಕ ವೈಜ್ಞಾನಿಕ ಸಂಶೋಧನೆಗಳು ಸಮಾಜಕ್ಕೆ ಅನುಕೂಲವಾದ ವಾತಾವರಣವನ್ನು ನಿರ್ಮಾಣ ಮಾಡಿವೆ ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಅಭಿಪ್ರಾಯಪಟ್ಟರು.

ನಗರದ ನ್ಯಾಷನಲ್ ಇಂಗ್ಲೀಷ್ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ "ಸೈನ್ಸ್ ಎಕ್ಸ್ ಪೋ" ವಿಜ್ಞಾನ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನ ಮೇಳದಲ್ಲಿ ತಯಾರಿಸಿರುವ ಮಾದರಿಗಳು ಇಷ್ಟಕ್ಕೇ ಸೀಮಿತವಾಗದೇ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರದರ್ಶಿಸುವ ಮೂಲಕ ಅವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ವಿಜ್ಞಾನವನ್ನು ಅಧ್ಯಯನ ಮಾಡಿದವರಿಗೆ ಭವಿಷ್ಯದಲ್ಲಿ ಸಾಕಷ್ಟು ಅವಕಾಶಗಳಿವೆ.

ಇಂತಹ ಮಾದರಿಗಳು ಸಮಾಜಕ್ಕೆ ಉತ್ತಮ ಸಂದೇಶ ಸಾರಲಿ ಎಂದರು. ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಸೈಯದ್ ಅಕ್ತರ್ ಮಾತನಾಡಿ " ವಿದ್ಯಾರ್ಥಿಗಳಿಗೆ ವಿಜ್ಞಾನಿಗಳ ಸಾಧನೆ ಪರಿಚಯವಾಗಬೇಕು, ವಿಜ್ಞಾನದ ಮೂಲಕ ವಿದ್ಯಾರ್ಥಿಗಳು  ಉತ್ತಮ ಫಲಿತಾಂಶವನ್ನು ತರುವ ಮೂಲಕ, ತಮ್ಮ ಛಾಪನ್ನು ಮೂಡಿಸಿ ಶಾಲೆಗೆ , ಶಿಕ್ಷಕರಿಗೆ, ತಂದೆ ತಾಯಿಯರಿಗೆ ಗೌರವ ತರಲಿ" ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಸೈಯದ್ ಶುಜತ್, ವ್ಯವಸ್ಥಾಪಕ ಇಮ್ರಾನ್ ಸೈಫ್, ಪ್ರಾಂಶುಪಾಲೆ ರುಕಿಯಾ ಖಾನಂ, ಉಪ ಪ್ರಾಂಶುಪಾಲ ಶಹನಾಜ್, ಶಿಕ್ಷಕರಾದ ದಿವ್ಯಾ, ಮೋಹಸೀನಾ, ಸಾಜಿದ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ