Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಳಪತಿ ವಿಜಯ್‌ಗೆ ಹೆಚ್‌ಡಿಕೆ ಟಾಂಗ್, 'ಆ ದೇವರೇ ಕಾಪಾಡಬೇಕು' ಎಂದಿದ್ದೇಕೆ?

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ತಮಿಳುನಾಡು ರಾಜಕೀಯ ರಂಗದಲ್ಲಿ ದಿನಕ್ಕೊಂದು ರೋಚಕ ತಿರುವುಗಳು ಸಿಗುತ್ತಿವೆ. ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು
108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಅಧಿಕಾರದ ಗದ್ದುಗೆ ಏರುವುದು ಸವಾಲಾಗಿ ಪರಿಣಮಿಸಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡು ವಿದ್ಯಮಾನಗಳ ಕುರಿತು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ.

ಉಚಿತಗಳ ಸುರಿಮಳೆ: ಬಜೆಟ್ ಲೆಕ್ಕಾಚಾರ ಬಿಚ್ಚಿಟ್ಟ ಕುಮಾರಸ್ವಾಮಿ ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಬಜೆಟ್ ವ್ಯತ್ಯಾಸ: ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30 ರಿಂದ 3.40 ಲಕ್ಷ ಕೋಟಿ ರೂ. ಇದೆ.
ಗ್ಯಾರಂಟಿ ವೆಚ್ಚ: ಆದರೆ ವಿಜಯ್ ಘೋಷಿಸಿರುವ ಯೋಜನೆಗಳನ್ನು ಜಾರಿಗೆ ತರಲು ವಾರ್ಷಿಕ ಕನಿಷ್ಠ
6 ರಿಂದ 7 ಲಕ್ಷ ಕೋಟಿ ರೂ. ಅಗತ್ಯವಿದೆ.

ವ್ಯಂಗ್ಯ: "ಇಷ್ಟೊಂದು ಬೃಹತ್ ಮೊತ್ತದ ಹಣವನ್ನು ಅವರು ಎಲ್ಲಿಂದ ತರುತ್ತಾರೆ? ವಿಜಯ್ ಅವರನ್ನು ಈಗ ಆ ದೇವರೇ ಕಾಪಾಡಬೇಕು," ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸರ್ಕಾರ ರಚನೆಯ ಸರ್ಕಸ್: ರಾಜ್ಯಪಾಲರ ನಡೆ ಏನು?
ತಮಿಳುನಾಡಿನಲ್ಲಿ ಮ್ಯಾಜಿಕ್ ನಂಬರ್
118 ತಲುಪಲು ವಿಜಯ್ ಪಕ್ಷಕ್ಕೆ ಇನ್ನೂ 10 ಶಾಸಕರ ಬೆಂಬಲ ಬೇಕಿದೆ. 118 ಶಾಸಕರ ಸ್ಪಷ್ಟ ಪಟ್ಟಿ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು, ವಿಜಯ್ ಈಗ ಸಂಖ್ಯಾಬಲ ಕ್ರೋಢೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಹಾಲಿ ಮುಖ್ಯಮಂತ್ರಿ ಸ್ಟಾಲಿನ್ "ಮುಂದಿನ ಆರು ತಿಂಗಳು ಏನನ್ನೂ ಮಾತನಾಡುವುದಿಲ್ಲ" ಎಂದು ಮೌನಕ್ಕೆ ಶರಣಾಗಿರುವುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ವಿರುದ್ಧ ಹೆಚ್‌ಡಿಕೆ ಆಕ್ರೋಶ-
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆಯ ಬಗ್ಗೆ ಮಾತನಾಡಿದ ಕುಮಾರಸ್ವಾಮಿ
, ಹಳೆಯ ಇತಿಹಾಸವನ್ನು ಕುಮಾರಸ್ವಾಮಿ ಅವರು ಕೆದಕಿದ್ದಾರೆ.

"ಕಾಂಗ್ರೆಸ್ ಪಕ್ಷವು ಚರಣ್ ಸಿಂಗ್, ವಿ.ಪಿ. ಸಿಂಗ್, ಚಂದ್ರಶೇಖರ್ ಹಾಗೂ ದೇವೇಗೌಡರ ಸರ್ಕಾರಗಳನ್ನೇ ಅಸ್ಥಿರಗೊಳಿಸಿದ ಇತಿಹಾಸ ಹೊಂದಿದೆ. ಅವರ ಬಗ್ಗೆ ಚರ್ಚಿಸುವುದೇ ಅನವಶ್ಯಕ. ಡಿಎಂಕೆ ಕೂಡ 20 ವರ್ಷಗಳ ಹಳೆಯ ಸಂಬಂಧ ಕಡಿದುಕೊಂಡು ಟಿವಿಕೆ ಜೊತೆ ಹೋಗಿದೆ. ಇವೆಲ್ಲದಕ್ಕೂ ಕಾಲವೇ ಉತ್ತರ ನೀಡಲಿದೆ." 

ಮೈತ್ರಿ ಊಹಾಪೋಹಗಳಿಗೆ ಬ್ರೇಕ್-
ಡಿಎಂಕೆ ಮತ್ತು ಎಐಎಡಿಎಂಕೆ ಒಂದಾಗಿ ಸರ್ಕಾರ ರಚಿಸುತ್ತವೆ ಎಂಬ ಸುದ್ದಿಯನ್ನು ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. "ನನ್ನ ಅನುಭವದ ಪ್ರಕಾರ
, ಇವೆರಡೂ ವಿರುದ್ಧ ಧ್ರುವದ ಪಕ್ಷಗಳು ಒಂದಾಗಲು ಸಾಧ್ಯವಿಲ್ಲ. ಮುಂದಿನ ಎರಡು ದಿನಗಳಲ್ಲಿ ಅಲ್ಲಿನ ರಾಜಕೀಯ ಚಿತ್ರಣ ಸ್ಪಷ್ಟವಾಗಲಿದೆ," ಎಂದು ಅವರು ಭವಿಷ್ಯ ನುಡಿದಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!