Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಕಾರ್ಮಿಕ ನಾಯಕರಿಗೆ ಗಣ್ಯರ ಸಂತಾಪ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ಕಾರ್ಮಿಕ ನಾಯಕರು
, ನನಗೆ ಆತ್ಮೀಯರೂ ಆಗಿದ್ದ ಅನಂತ ಸುಬ್ಬರಾವ್ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್, ವಿಜಯೇಂದ್ರ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಐಟಿಯುಸಿ ಸಂಘಟನೆಯಲ್ಲಿ ಸುಮಾರು 5 ದಶಕಗಳ ಕಾಲ ಸಕ್ರಿಯರಾಗಿದ್ದ ಶ್ರೀ ಅನಂತ ಸುಬ್ಬರಾವ್ ಅವರು ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಂತರ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಸಂಘಟನೆಯನ್ನು ಕೆಳಮಟ್ಟದಿಂದ ಕಟ್ಟಿದ್ದರು. ಸುಮಾರು ಐದು ದಶಕಗಳ ಕಾಲ ಬೀದಿಯಿಂದ ಹಿಡಿದು ಸರ್ಕಾರದ ಉನ್ನತ ಮಟ್ಟದ ಸಂಧಾನ ಸಭೆಗಳವರೆಗೆ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿದ ಬದ್ಧತೆಯುಳ್ಳ ನಾಯಕಾಗಿದ್ದರು ಎಂದು ಅವರುತಿಳಿಸಿದ್ದಾರೆ.

ನಾನು ಸಾರಿಗೆ ಸಚಿವನಾಗಿದ್ದ ಸಂದರ್ಭದಲ್ಲಿಯೂ ಸಹ ಹಲವಾರು ಬಾರಿ ಸಾರಿಗೆ ನೌಕರರ ಸಮಸ್ಯೆಗಳ ಸಂಧಾನ ಸಭೆಗಳಲ್ಲಿ ಅವರನ್ನು ಭೇಟಿಯಾಗುವ ಅವಕಾಶ ದೊರಕಿತ್ತು. ಕಾರ್ಮಿಕರ ಪರ ಅಚಲವಾದ ನಿಲುವು ಹೊಂದಿದ್ದರೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಹಕರಿಸಬೇಕು ಎಂದು ಮನವಿ ಮಾಡಿದಾಗ ಸಹಕರಿಸುತ್ತಿದ್ದರು.

2025ರ ಡಿಸೆಂಬರ್‌ನಲ್ಲಿ ವಯೋಸಹಜ ಕಾರಣಗಳಿಂದ ಎಐಟಿಯುಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರಾದರೂ, ತಮ್ಮ ಕಡೆಯ ಕ್ಷಣದವರೆಗೂ ಕಾರ್ಮಿಕರ ಪರವಾದ ಗಟ್ಟಿ ದನಿಯಾಗಿ ನಿಂತಿದ್ದೇ ಅವರ ಬದ್ಧತೆಯ ಬದುಕಿಗೆ ಸಾಕ್ಷಿ.

ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ, ಅಸಂಖ್ಯಾತ ಅಭಿಮಾನಿ ಬಳಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಗಣ್ಯರು ಪ್ರಾರ್ಥಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ